ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದೆ. ಟರ್ಮಿನಲ್ 2 ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಸ್ಥಳಾಂತರ ಮಾಡುವಾಗ ಶೇಟಲ್ ಬಸ್ ಟರ್ಮಿನಲ್​ 2 ಪಿಲ್ಲಲ್​ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬಸ್​ನಲ್ಲಿದ್ದ 15 ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿವೆ. ಬೆಳಗ್ಗೆ 5.15ಕ್ಕೆ ಅವಘಡ ಸಂಭವಿಸಿದ್ದು ತಕ್ಷಣ ಗಾಯಾಳುಗಳನ್ನು ಏರ್ಪೋರ್ಟ್​ನಲ್ಲಿರುವ ಅಸ್ಟರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಐದಾರು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರ ಬಳಿಕ ಲಡಾಕ್, ಕಾರ್ಗಿಲ್​ನಲ್ಲೂ ವಿಆರ್​ಎಲ್: ಭಾರತದ ಅತಿದೊಡ್ಡ ಲಾಜಿಸ್ಟಿಕ್ಸ್-ಸಾರಿಗೆ ಕಂಪನಿ; ಡಾ. ವಿಜಯ ಸಂಕೇಶ್ವರ ಅವರಿಗೆ ವಿವಿಧ ಸಂಸ್ಥೆಗಳಿಂದ ಸನ್ಮಾನ
ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್​ ಚಾಲಕ ರಾತ್ರಿ ಪಾಳಯದಲ್ಲಿ ಕೆಲಸ ಮಾಡುತ್ತಿದ್ದ. ಮುಂಜಾನೆ ನಿದ್ರೆಗೆ ಜಾರಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಇಂದು ಮುಂಜಾನೆ ನಡೆದ ಘಟನೆಯಿಂದ ಪ್ರಯಾಣಿಕರು ಬೆಚ್ಚಿ‌ಬಿದ್ದಿದ್ದಾರೆ.(ದಿಗ್ವಿಜಯ ನ್ಯೂಸ್​)
ನಟ ವಿಜಯ್​ ರಾಜಕೀಯ ಪ್ರವೇಶ ವಿಚಾರ: ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಹೇಳಿಕೆ

ಜಮ್ಮು-ಕಾಶ್ಮೀರ ಬಳಿಕ ಲಡಾಕ್, ಕಾರ್ಗಿಲ್​ನಲ್ಲೂ ವಿಆರ್​ಎಲ್: ಭಾರತದ ಅತಿದೊಡ್ಡ ಲಾಜಿಸ್ಟಿಕ್ಸ್-ಸಾರಿಗೆ ಕಂಪನಿ; ಡಾ. ವಿಜಯ ಸಂಕೇಶ್ವರ ಅವರಿಗೆ ವಿವಿಧ ಸಂಸ್ಥೆಗಳಿಂದ ಸನ್ಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 17 =
Remember me
