ವಿಜಯಪುರ:ಇತ್ತೀಚೆಗೆ ಹಠಾತ್ ಹೃದಯಾಘಾತದಿಂದ ಆಗುತ್ತಿರುವ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಇಂದು ಅಂಥದ್ದೇ ಇನ್ನೊಂದು ಪ್ರಕರಣ ವರದಿಯಾಗಿದೆ. ಬಸ್ ಚಲಾಯಿಸುತ್ತಿರುವಾಗಲೇ ಚಾಲಕರೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಈ ಘಟನೆ ನಡೆದಿದೆ. ಮುರಿಗೆಪ್ಪ ಅಥಣಿ ಎಂಬವರೇ ಸಾವಿಗೀಡಾದ ಚಾಲಕ. ಈ ಬಸ್​ ಕಲಬುರಗಿ ಜಿಲ್ಲೆ ಅಫಜಲಪುರದಿಂದ ವಿಜಯಪುರಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಮಾರ್ಗಮಧ್ಯೆ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಮತ್ತೆ ಸುದ್ದಿಯಲ್ಲಿ ಪವಿತ್ರಾ ಲೋಕೇಶ್; ಹೊಸ ಪ್ರಯತ್ನವಾದರೂ ಏನು?
ಬಸ್ ಹೆಡ್​​ಲೈಟ್ ಸಮಸ್ಯೆ ಇರುವುದರಿಂದ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಈ ಬಸ್​ ಸಿಂದಗಿ ಡಿಪೋ ಕಡೆಗೆ ಹೊರಟಿತ್ತು. ಈ ದಾರಿಯಲ್ಲಿ ಮುರಿಗೆಪ್ಪಗೆ ಹೃದಯಾಘಾತವಾಗಿದೆ. ಇನ್ನೇನು ಬಸ್​ ಪಕ್ಕದಲ್ಲಿದ್ದ ಪೆಟ್ರೋಲ್ ಬಂಕ್​ಗೆ ನುಗ್ಗಲಿದೆ ಎನ್ನುವಷ್ಟರಲ್ಲಿ ಕಂಡಕ್ಟರ್ ಶರಣು ಟಾಕಳಿ ಅವರು ಬ್ರೇಕ್​ ಅದುಮಿ ಬಸ್ ನಿಲ್ಲಿಸಿದ್ದಾರೆ.
ಇದನ್ನೂ ಓದಿ:ಒಬ್ಬ ಮಗನ ಚಿಕಿತ್ಸೆಗಾಗಿ ಇನ್ನೊಬ್ಬ ಮಗನನ್ನು ಮಾರಲೆತ್ನಿಸಿದ ತಂದೆ; ಪತಿ ವಿರುದ್ಧ ಪತ್ನಿಯ ದೂರು
ಬಸ್​ನಲ್ಲಿದ್ದ ಪ್ರಯಾಣಿಕರನ್ನು ಈ ಮೊದಲೇ ಇಳಿಸಿದ್ದರಿಂದ ಹಾಗೂ ಕಂಡಕ್ಟರ್ ಸರಿಯಾದ ಸಮಯಕ್ಕೆ ಬ್ರೇಕ್ ಒತ್ತಿ ಬಸ್ ನಿಲ್ಲಿಸಿದ್ದರಿಂದಾಗಿ ಭಾರಿ ಅನಾಹುತ ಆಗುವಂಥದ್ದು ತಪ್ಪಿದಂತಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಫಜಲಪುರ ಡಿಪೋ ಅಧಿಕಾರಿ-ಸಿಬ್ಬಂದಿ ಸೂಕ್ತ ಕ್ರಮಕೈಗೊಂಡಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಜ್ಯಕ್ಕೆ ಮಾನ್ಸೂನ್ ಆಗಮನ ಯಾವಾಗ?; ಇಲ್ಲಿದೆ ಹವಾಮಾನ ಇಲಾಖೆ ಮಾಹಿತಿ

ಕಾಂಗ್ರೆಸ್​​ನವರಿಂದ ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್​!; ಯಾಕೆ, ಏನು? ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + eleven =
Remember me
