ಚಾಮರಾಜನಗರ:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ ಸೇತುವೆಯಿಂದ ಕೆಳಕ್ಕೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ಮತ್ತೊಬ್ಬರು ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಮೂರಕ್ಕೆ ಏರಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ. ಪಾಳ್ಯದ ಕುಡುವಾಳೆ ಹಳ್ಳದಲ್ಲಿ ಬಸ್​ ಪಲ್ಟಿಯಾಗಿ ಈ ಅಪಘಾತ ಉಂಟಾಗಿತ್ತು.
ಈ ಅಪಘಾತದಲ್ಲಿ ಬಸ್​ನಲ್ಲಿದ್ದ ಮಾಳಿಗನತ್ತ ಗ್ರಾಮದ ಶಿವಮ್ಮ (70)ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಪಿ.ಜಿ. ಪಾಳ್ಯದ ರಮೇಶ್ (28) ಕಾಮಗೆರೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಅಲ್ಲದೆ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಪಿ.ಜಿ. ಪಾಳ್ಯ, ಕಾಮಗೆರೆ, ಕೊಳ್ಳೇಗಾಲ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಇಂದು ಮತ್ತೊಂದು ಬಸ್​ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ…
ಇದೀಗ ಗಾಯಾಳುಗಳ ಪೈಕಿ ಮಾಳಿಗನತ್ತ ಗ್ರಾಮದ ಸಣ್ಣರಾಯಪ್ಪ(60) ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೊಯಮತ್ತೂರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪಿ.ಜಿ. ಪಾಳ್ಯ ಗ್ರಾಮದ ಕಡೆ ತೆರಳುತ್ತಿದ್ದ ಬಸ್ ತಾಂತ್ರಿಕ ದೋಷದ ಕಾರಣದಿಂದಾಗಿ ಅಪಘಾತಕ್ಕೆ ಈಡಾಗಿದೆ ಎನ್ನಲಾಗುತ್ತಿದೆ.
ಕಾರ್ ಡೋರ್​ ತೆಗೆಯಲಾಗದೆ ಸಾವು!; ರಕ್ಷಿಸುವಷ್ಟರಲ್ಲಿ ಸ್ಫೋಟ, ಜೀವಂತ ಸುಟ್ಟುಹೋದ ಯುವಕ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eleven =
Remember me
