ಚಾಮರಾಜನಗರ:ಸಾರಿಗೆ ಸಂಸ್ಥೆಯ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದು ಅಪಘಾತಗೊಂಡ ಪ್ರಕರಣದಲ್ಲಿ ಇಬ್ಬರು ಸಾವಿಗೀಡಾಗಿದ್ದು, ಇಬ್ಬರು ಗಂಭೀರ ಗಾಯಾಳುಗಳನ್ನು ಸೇರಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ. ಪಾಳ್ಯದ ಕುಡುವಾಳೆ ಹಳ್ಳದಲ್ಲಿ ಬಸ್​ ಪಲ್ಟಿಯಾಗಿ ಬಿದ್ದಿದೆ.
ಈ ಅಪಘಾತದಲ್ಲಿ ಬಸ್​ನಲ್ಲಿದ್ದ ಮಾಳಿಗನತ್ತ ಗ್ರಾಮದ ಶಿವಮ್ಮ (70), ಪಿ.ಜಿ. ಪಾಳ್ಯದ ರಮೇಶ್ (28) ಸಾವಿಗೀಡಾಗಿದ್ದಾರೆ. ಶಿವಮ್ಮ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ರಮೇಶ್ ಕಾಮಗೆರೆ ಆಸ್ಪತ್ರೆಯಲ್ಲಿ ಸಾವಿಗೀಡಾದರು.
ಇದನ್ನೂ ಓದಿ:ಭೀಕರ ಅಪಘಾತ: ತಾಯಿ-ಮಗಳ ಸಾವು, ತಂದೆಯ ಪರಿಸ್ಥಿತಿ ಗಂಭೀರ..
ಗಂಭಿರವಾಗಿ ಗಾಯಗೊಂಡಿರುವರನ್ನು ಪಿ.ಜಿ. ಪಾಳ್ಯ, ಕಾಮಗೆರೆ, ಕೊಳ್ಳೇಗಾಲ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಿ.ಜಿ. ಪಾಳ್ಯ ಗ್ರಾಮದ ಕಡೆ ತೆರಳುತ್ತಿದ್ದ ಬಸ್ ತಾಂತ್ರಿಕ ದೋಷದ ಕಾರಣದಿಂದಾಗಿ ಅಪಘಾತಕ್ಕೆ ಈಡಾಗಿದೆ ಎನ್ನಲಾಗುತ್ತಿದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + seventeen =
Remember me
