ತುಮಕೂರು:ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಜನ ಸಾವಿಗೀಡಾದ ಪ್ರಕರಣದ ಬೆನ್ನಿಗೇ ರಾಜ್ಯದಲ್ಲಿ ಇನ್ನೊಂದು ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಕಾರು-ಸರ್ಕಾರಿ ಬಸ್‌ ನಡುವೆ ಅಫಘಾತ; 6 ಮಂದಿ ಮೃತ್ಯು, ಇಬ್ಬರು ಗಂಭೀರ
ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಚಿಕಿತ್ಸೆಗೆಂದು ಉಡುಪಿಯಿಂದ ಬೆಂಗಳೂರಿಗೆ ಬಂದವನ ಎರಡೂ ಕಾಲು ಪೂರ್ತಿ ಜಖಂ!
ತುಮಕೂರಿನ ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಳುಗಳಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಅಪರಿಚಿತರ ಬಳಿ ಲಿಫ್ಟ್ ಕೇಳಿಯೇ ಏಕಾಂಗಿಯಾಗಿ ಇಡೀ ರಾಜ್ಯ ಸುತ್ತಲಾರಂಭಿಸಿದ್ದಾಳೆ ಈ ಯುವತಿ: ಉದ್ದೇಶವಾದರೂ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
