ಹುಮನಾಬಾದ್:ಬೀದರ್ ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಈಶಾನ್ಯ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾದ ಘಟನೆ ತಾಲೂಕಿನ ದುಬಲಗುಂಡಿ ಕ್ರಾಸ್ ಹತ್ತಿರ ಭಾನುವಾರ ಸಂಜೆ ನಡೆದಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೀದರ್ ಡಿಪೋ-2ಕ್ಕೆ ಸೇರಿದ ಬಸ್ (ಕೆಎ 38, ಎಫ್ 1279) ಇದಾಗಿದೆ. ಬಸ್ ರಸ್ತೆ ಪಕ್ಕದ ತಗ್ಗಿಗೆ ಬಿದ್ದು ಬುಡಮೇಲಾದರೂ ಅದೃಷ್ಟವಶಾತ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬಸ್ನಲ್ಲಿ 50 ಪ್ರಯಾಣಿಕರಿದ್ದರು. ಇದರಲ್ಲಿ 10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೀದರ್ ನ ಬ್ರಿಮ್ಸ್ ಹಾಗೂ ಹುಮನಾಬಾದ್ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಭಾಲ್ಕಿ ಕಡೆಯಿಂದ ವೇಗವಾಗಿ ಬಂದ ಜೀಪ್ ದುಬಲಗುಂಡಿ ಕ್ರಾಸ್ ಬಳಿಯ ತಿರುವಿನಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿರುವುದು ಬಸ್ ಚಾಲಕ ಗಮನಿಸಿದ್ದಾನೆ. ಜೀಪ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ರಸ್ತೆ ಪಕ್ಕದಲ್ಲಿ ಉರುಳಿದೆ. ಚಾಲಕ ತೋರಿದ ಕಾಳಜಿಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಶಾಸಕ ರಾಜಶೇಖರ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಆಸ್ಪತ್ರೆ ವೈದ್ಯರಿಗೆ ಸೂಚಿಸಿದರು. ಹುಮನಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
