ಬೆಂಗಳೂರು:ಕರೊನಾ ಸಂಕಷ್ಟದ ಸಮಯದಲ್ಲೂ ಕೆಲ ಪರೀಕ್ಷೆಗಳು ನಡೆಯುತ್ತಿವೆ. ಕಳೆದ ಶೈಕ್ಷಣಿಕ ವರ್ಷ ಮುಗಿದಿದ್ದು, ವಿದ್ಯಾರ್ಥಿಗಳ ಬಸ್​ಪಾಸ್​ ಅವಧಿ ಮುಗಿದಿದೆ. ಇದೀಗ ಪರೀಕ್ಷೆ ಆರಂಭವಾದರೆ ಮತ್ತೆ ಬಸ್​ಪಾಸ್​ ಮಾಡಿಸಿಕೊಳ್ಳಬೇಕೆ? ಅಥವಾ ಹಣ ಕೊಟ್ಟು ನಿತ್ಯ ಟಿಕೆಟ್​ ಪಡೆದು ಕಾಲೇಜಿಗೆ ಹೋಗಬೇಕೇ? ಎಂಬ ಗೊಂದಲ ಬಹುತೇಕ ವಿದ್ಯಾರ್ಥಿಗಳಲ್ಲಿತ್ತು. ಇದೀಗ ಈ ಗೊಂದಲಕ್ಕೆ ಕೆಎಸ್​ಆರ್​ಟಿಸಿ ತೆರೆ ಎಳೆದಿದೆ.
ವೃತ್ತಿಪರ, ಪದವಿ, ಸ್ನಾತಕೋತ್ತರ ಪರೀಕ್ಷೆ ಬರೆಯುವವರಿಗೆ ಕಳೆದ ಶೈಕ್ಷಣಿಕ ಸಾಲಿನ ಬಸ್​ ಪಾಸ್​ ತೋರಿಸಿ ಉಚಿತ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ಅವಕಾಶ ಕಲ್ಪಿಸಿದೆ.ಇದನ್ನೂ ಓದಿರಿಸಚಿವ ಸಿ.ಟಿ.ರವಿಗೆ ಖಡಕ್​ ವಾರ್ನಿಂಗ್ ಕೊಟ್ಟ ಎಚ್​ಡಿಕೆ !
ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್​, ಈ ಸಂಬಂಧ ಸಾರಿಗೆ ಸಚಿವರಿಗೆ ಪತ್ರ ಬರೆದು, ಸೆಪ್ಟೆಂಬರ್​ನಲ್ಲಿ ರಾಜ್ಯದ ಕಾನೂನು ವಿಶ್ವವಿದ್ಯಾಲಯ, ತಾಂತ್ರಿಕ ವಿಶ್ವವಿದ್ಯಾಲಯ, ವೃತ್ತಿಪರ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ. ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಸಾರಿಗೆ ನಿಗಮಗಳಿಂದ ಬಸ್​ ಪಾಸ್​ ವಿತರಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸೆಪ್ಟೆಂಬರ್​ ತಿಂಗಳಲ್ಲಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ನಗರ ಸಾರಿಗೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು.
ಈ ಮನವಿಯನ್ನಾಧರಿಸಿ ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಕಳೆದ ವರ್ಷದ ಬಸ್​ ಪಾಸ್​ ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಇದೀಗ ಕೆಎಸ್​ಆರ್​ಟಿಸಿ, ಕಳೆದ ವರ್ಷದ ಬಸ್​ಪಾಸ್​ ಮೂಲಕ ಉಚಿತ ಪ್ರಯಾಣಿಸಬಹುದು ಎಂದು ಆದೇಶ ಹೊರಡಿಸಿದೆ.
ಕರೊನಾ ಸೋಂಕಿನ ಛಾಯೆ ರಾಜ್ಯ ಸಾರಿಗೆ ಸಂಸ್ಥೆಗೂ ಆರ್ಥಿಕ ಸಂಕಷ್ಟ ತಂದೊಡ್ಡಿದೆ. ಹೀಗಾಗಿ ನಾಲ್ಕು ನಿಗಮಗಳೂ ನಷ್ಟದಲ್ಲಿದೆ. ಅಲ್ಲದೆ ಈ ಬಾರಿ ವಿದ್ಯಾರ್ಥಿಗಳಿಗೆ ಉಚಿತ ಅಥವಾ ರಿಯಾಯಿತಿ ಬಸ್​ಪಾಸ್​ಗಳನ್ನು ವಿತರಿಸಿದಲ್ಲಿ ಅದರ ಮೊತ್ತವನ್ನು ವಿದ್ಯಾರ್ಥಿ ಅಥವಾ ಸಂಸ್ಥೆಯಿಂದಲೇ ಭರಿಸತಕ್ಕದ್ದು ಎಂದು ಸರ್ಕಾರ ಆದೇಶಿಸಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅಸ್ತು ಎಂದ ಕೆಎಸ್​ಆರ್​ಟಿಸಿ ನಿರ್ಧಾರವನ್ನು ಪರೀಕ್ಷಾರ್ಥಿಗಳು ಸ್ವಾಗತಿಸಿದ್ದಾರೆ.
ಈ ಬಾರಿ ವಿದ್ಯಾರ್ಥಿಗಳಿಗೆ ಇರಲ್ಲ ರಿಯಾಯ್ತಿ ಬಸ್​ಪಾಸ್​; ಹಣ ಕೊಡಲ್ಲ ಎಂದು ಸರ್ಕಾರದ ಆದೇಶ

video/ ಬೆಂಕಿಯಲ್ಲಿ ಚಿತ್ರ ಬಿಡಿಸಿ ದಾಖಲೆ ಬರೆದ ಕರ್ನಾಟಕದ ಕುವರ

ಕೆಪಿಸಿಸಿ ಕಚೇರಿಗೆ ಅರಮನೆ ಟಚ್​, ವಾಸ್ತುದೋಷ ರಿಪೇರಿಗೆ ಬಾಗಿಲನ್ನೇ ಬದಲಿಸಿದ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
