ಮಂಗಳೂರು:ಬಸ್​ನಲ್ಲಿ ಕಾಮುಕನೊಬ್ಬ ಹಾಡಹಗಲೇ ಯುವತಿಗೆ ಕಿರುಕುಳ ನೀಡಿದ್ದು, ರಕ್ಷಣೆಗಾಗಿ ಯುವತಿ ಚೀರಾಡಿದರೂ ಯಾರೊಬ್ಬರೂ ಸಹಾಯಕ್ಕೆ ಬಂದಿಲ್ಲ! ಕೂಡಲೇ ಆ ಬಸ್​ನಿಂದ ಇಳಿದು ಮತ್ತೊಂದು ಬಸ್​ನಲ್ಲಿ ಹಿಂಬಾಲಿಸಿಕೊಂಡು ಬಂದವ ಮತ್ತೆ ಆಕೆಯೊದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಆ ವೇಳೆ ಆತನ ಫೊಟೋಗಳನ್ನು ತೆಗೆದ ಸಂತ್ರಸ್ತ ಯುವತಿ, ಇನ್​ಸ್ಟಾಗ್ರಾಂನಲ್ಲಿ ಹಾಕಿ ಆ ಘಟನೆ ಬಗ್ಗೆ ವಿವರಿಸಿದ್ದಾರೆ.
ಯುವತಿಯ ಪೋಸ್ಟ್ ಆಧಾರದ ಮೇರೆಗೆ ಕಾಸರಗೋಡು ನಿವಾಸಿ ಹುಸೇನ್ (41) ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಜ.14 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ. ದೇರಳಕಟ್ಟೆ-ಮಂಗಳೂರು ಮಾರ್ಗದ ಖಾಸಗಿ ಬಸ್​ನಲ್ಲಿ ಯುವತಿ ಪ್ರಯಾಣಿಸುತ್ತಿದ್ದಳು. ಆಕೆಯ ಪಕ್ಕದಲ್ಲೇ ಕುಳಿತುಕೊಂಡ ಕಾಮುಕ, ಯುವತಿಗೆ ದೈಹಿಕ ಕಿರುಕುಳ ನೀಡಿದ್ದಾನೆ. ಯುವತಿ ವಿರೋಧ ವ್ಯಕ್ತಪಡಿಸಿದ ಮೇಲೆ ಬಸ್​ನಿಂದ ಕೆಳಗಿಳಿದ ಆರೋಪಿ, ಮತ್ತೊಂದು ಬಸ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಮತ್ತೆ ಕಿರುಕುಳ ಮತ್ತೆ ಯುವತಿ ಪಕ್ಕದಲ್ಲೇ ಕೂತು ಅಸಭ್ಯವಾಗಿ ವರ್ತಿಸಿದ್ದಾನೆ.ಇದನ್ನೂ ಓದಿರಿಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಈ ವೇಳೆ ಕಾಮುಕನ ಫೋಟೋ ತೆಗೆದು ವೈರಲ್ ಮಾಡೋದಾಗಿ ಎಚ್ಚರಿಸಿದ ಯುವತಿ, ಮೊಬೈಲ್​ ಕ್ಯಾಮರಾ ಆನ್​ ಮಾಡುತ್ತಿದ್ದಂತೆ ಫೋಟೋಗೆ ಫೋಸ್ ಕೊಟ್ಟಿದ್ದ. ಆರೋಪಿಯ ಫೋಟೋವನ್ನು ಇನ್​ಸ್ಟಾಗ್ರಾಂನಲ್ಲಿ ವಿವರ ಸಹಿತ ಯುವತಿ ಹಾಕಿದ್ದಳು. ಇದನ್ನು ನೋಡಿದ ಪೊಲೀಸರು ಕಾಮುಕನನ್ನು ಬುಧವಾರ ಬಂಧಿಸಿದ್ದಾರೆ.
ಯುವತಿಯ ದಿಟ್ಟ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್​ ಕಮಿಷನರ್ ಎನ್. ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಾಟ್ಸ್​ಆ್ಯಪ್​ ವಿಡಿಯೋ ಕಾಲ್​ನಲ್ಲಿ ಬೆತ್ತಲಾದ ಯುವತಿಯರು… ಕಣ್ತುಂಬಿಕೊಂಡವನಿಗೆ ಕಾದಿತ್ತು ಭಾರಿ ಸಂಕಷ್ಟ!

ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ

ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?

ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
