ಬೆಳಗಾವಿ:ಉದ್ಯಮಿಯೊಬ್ಬರ ಸೊಸೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ಉದ್ಯಮಿ ಜಯಶೀಲ ಶೆಟ್ಟಿ ಅವರ ಸೊಸೆ ಶೀತಲ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು. ಈಕೆ ಜಯಶೀಲ ಶೆಟ್ಟಿ ಅವರ ಪುತ್ರ ಮನೀಶ್ ಅವರ ಪತ್ನಿ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಈ ಪ್ರಕರಣ ನಡೆದಿದೆ.
ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ವರ್ಷದ ಹಿಂದಷ್ಟೇ ಈ ದಂಪತಿಗೆ ಮದುವೆಯಾಗಿದ್ದು, ಒಂದು ಹೆಣ್ಣು ಮಗುವಿದೆ. ಗಂಡ ಟೂರ್​ಗೆ ಕರೆದುಕೊಂಡು ಹೋಗುವುದಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕುಟುಂಬಸ್ಥರು ವಿದೇಶ ಪ್ರವಾಸದಲ್ಲಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಲಕಿ ಬರೆದ ಪತ್ರಕ್ಕೆ ಎರಡು ಗಂಟೆಯಲ್ಲೇ ಸಿಎಂ ಕಚೇರಿ ಸ್ಪಂದನೆ; ವಿಜಯವಾಣಿಗೆ ಮನವಿ ಮಾಡಿದ್ದ 3ನೇ ತರಗತಿ ವಿದ್ಯಾರ್ಥಿನಿ

ಓ.. ಮತ್ತೆ ಸದ್ದು ಮಾಡುತ್ತಿರುವ ‘ಕಾಂತಾರ’; ವರ್ಷದ ಬಳಿಕವೂ ನೆನಪಿಸಿಕೊಳ್ಳುತ್ತಿರುವ ಜನರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − three =
Remember me
