

ವಿಜಯವಾಣಿ ಸುದ್ದಿಜಾಲ, ಬೆಂಗಳೂರು:ಭ್ರಷ್ಟಾಚಾರಿಗಳನ್ನು ಸಹಿಸಿಕೊಳ್ಳುವ ಮತ್ತು ಪ್ರೋತ್ಸಾಹಿಸುವ ವಾತಾವರಣ ಸೃಷ್ಟಿಯಾಗುತ್ತಿರುವುದು ಆತಂಕದ ಸಂಗತಿ. ಈ ಬಗ್ಗೆ ಮಾಧ್ಯಮಗಳು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೆಯುಡಬ್ಲೂೃಜೆ ಸಭಾಂಗಣದಲ್ಲಿ ಏರ್ಪಡಿಸಿದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಾಧ್ಯಮವು ದೇಶಕ್ಕೆಂದೂ ಅಭಿವೃದ್ಧಿಪೂರಕವಾಗಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ಉತ್ತಮ ಸಂದೇಶವನ್ನು ಸಮಾಜವು ನಿರೀಕ್ಷಿಸುತ್ತದೆ. ಆ ನಿಟ್ಟಿನಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತುವ ಕೆಲಸ ಮಾಧ್ಯಮದಿಂದ ಆಗಬೇಕು ಎಂದರು.ಮಾಧ್ಯಮ ಅಕಾಡೆಮಿ ಅಧ್ಯಕ್ಷ ಆಯೇಷಾ ಖಾನಂ ಮಾತನಾಡಿ, ಮಾಧ್ಯಮಗಳು ಪ್ರಜಾಪ್ರಭುತ್ವದ ಕನ್ನಡಿಯಾಗಿದ್ದು, ಪತ್ರಕರ್ತರು ಪೂರ್ವಾಗ್ರಹಪೀಡಿತರಾಗಿ ಕಾರ್ಯನಿರ್ವಹಿಸಬಾರದು ಎಂದರು.ವಾರ್ತಾ ಇಲಾಖೆಯ ಜಂಟಿ ನಿರ್ದೇಶಕಿ ಪಲ್ಲವಿ ಹೊನ್ನಾಪುರ ಮಾತನಾಡಿ, ಮಾಧ್ಯಮಗಳು ನಕಾರಾತ್ಮಕ ವಿಷಯಗಳ ಬಗ್ಗೆ ಗಮನಹರಿಸಬೇಕಾದುದ್ದು ಅನಿವಾರ್ಯವಾಗಿದ್ದು, ಸಮುದಾಯಕ್ಕೆ ಸದಾ ಉತ್ತಮ ಸಂದೇಶ ನೀಡಬೇಕು ಎಂದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಮಸ್ಯೆ ಮತ್ತು ಸವಾಲುಗಳು ಸಂಘಟನೆಗಳಲ್ಲಿ ಸಾಮಾನ್ಯವಾಗಿದ್ದು ಅವುಗಳನ್ನು ಮೆಟ್ಟಿ ನಿಲ್ಲಬೇಕು ಎಂದರು.ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಸೋಮಶೇಖರ ರೆಡ್ಡಿ, ಚಂದ್ರಕಾಂತ್ ವಡ್ಡು ಹಾಗೂ ಈಶ್ವರ್ ಅವರನ್ನು ಸನ್ಮಾನಿಸಲಾಯಿತು.ಕಳೆದ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ ನಗರ ಘಟಕದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು.ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ,ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್ ಭಾಗವಹಿಸಿದ್ದರು.ಕಾರ್ಯಕ್ರಮದ ಆರಂಭದಲ್ಲಿ ಕೆ.ವಿ.ಪರಮೇತ್ ಸ್ವಾಗತಿಸಿದರು. ಜೈಕುಮಾರ್ ವಂದಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + ten =
Remember me
