ಬೆಂಗಳೂರು:ಪ್ರತಿ ಟನ್​ಗೆ 15 ಸಾವಿರ ರೂ. ನೀಡಿ ರೈತರಿಂದ ಮೆಕ್ಕೆಜೋಳ ಖರೀದಿಸಲು ಕರ್ನಾಟಕ ಹಾಲು ಮಹಾಮಂಡಲ ತೀರ್ವನಿಸಿದ್ದು, ಮೆಕ್ಕೆಜೋಳ ಬೆಳೆಗಾರರ ನೆರವಿಗೆ ಧಾವಿಸಿದೆ.
ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ, ರೈತರಿಂದ ಒಂದು ಲಕ್ಷ ಟನ್ ಮೆಕ್ಕೆಜೋಳ ಖರೀದಿ ಮಾಡಬೇಕೆಂಬ ತೀರ್ಮಾನ ತೆಗೆದುಕೊಳ್ಳಲಾಯಿತು.
ಸಭೆಯ ನಂತರ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಸಿಎಂ ಆದೇಶದಂತೆ ರೈತರ ನೆರವಿಗೆ ಧಾವಿಸುವ ನಿರ್ಧಾರ ಮಾಡಲಾಗಿದೆ. ಜನವರಿ ಕೊನೆಯವರೆಗೆ ಬೇಕಾಗುವ ಮೆಕ್ಕೆಜೋಳದ ಖರೀದಿಗೆ ವ್ಯವಸ್ಥೆ ಮಾಡಲಾಗುವುದು. ಕರೊನಾ ಹಿನ್ನೆಲೆಯಲ್ಲಿ ಮೆಕ್ಕೆಜೋಳದ ದರ ಕುಸಿತಗೊಂಡಿದ್ದರಿಂದ ಕೆಎಂಎಫ್ ರೈತರ ನೆರವಿಗೆ ಧಾವಿಸಿ ಮೇ-ಜೂನ್​ನಲ್ಲಿ 51,259 ಟನ್ ಖರೀದಿ ಮಾಡಿತ್ತು ಎಂದರು.
ಕೆಎಂಎಫ್​ನ 5 ಪಶು ಆಹಾರ ಘಟಕಗಳಿಂದ ವಾರ್ಷಿಕ 6.5 ರಿಂದ 7.0 ಲಕ್ಷ ಟನ್ ಪಶು ಆಹಾರ ಉತ್ಪಾದನೆ ಮಾಡಲಾಗುತ್ತಿದ್ದು, ವಾರ್ಷಿಕ ಸರಾಸರಿ 2.20 ಲಕ್ಷ ಟನ್ ಮೆಕ್ಕೆ ಜೋಳ ಅವಶ್ಯಕತೆ ಇದೆ. ನಂದಿನಿ ಗೋಲ್ಡ್ ಪಶು ಆಹಾರದಲ್ಲಿ ಶಕ್ತಿ ಪ್ರಮಾಣ ಹೆಚ್ಚಿಸಲು ಶೇ.35 ಮೆಕ್ಕೆಜೋಳವನ್ನು ಉಪಯೋಗಿಸಲಾಗುತ್ತಿದೆ ಎಂದು ತಿಳಿಸಿದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ, ಶಾಸಕ ಭೀಮಾನಾಯ್ಕ, ಹಿರೇಗೌಡರ, ಕಾ.ಪು. ದಿವಾಕರಶೆಟ್ಟಿ, ಮಾರುತಿ ಕಾಶೆಂಪೂರ, ಶ್ರೀಶೈಲಗೌಡ ಪಾಟೀಲ, ಸಿ.ವೀರಭದ್ರಬಾಬು, ವಿಶ್ವನಾಥ, ನಂಜುಂಡಸ್ವಾಮಿ, ಸಿ.ಶ್ರೀನಿವಾಸ, ಆನಂದಕುಮಾರ್, ಕೆ.ಎಸ್. ಕುಮಾರ, ಅಮರನಾಥ ಜಾರಕಿಹೊಳಿ, ಪ್ರಕಾಶ, ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ, ಕೆಎಂಎಫ್ ಎಂಡಿ ಬಿ.ಸಿ. ಸತೀಶ್ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 17 =
Remember me
