ಬೆಂಗಳೂರು:ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿರುತ್ತದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.
ಮುಂಬರುವ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಲಹಾ ರೂಪದ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಮಂಡಳಿಯು ಹೋಳಿ ಹಬ್ಬ ಸಾಂಸ್ಕೃತಿಕವಾದ ಆಚರಣೆಯ ಹಬ್ಬ. ಇದನ್ನ ತಮ್ಮ ಮನೆಗಳಲ್ಲಿ, ವಾಸಸ್ಥಳಗಳಲ್ಲಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಸಾಂಸ್ಕೃತಿವಾಗಿ ಆಚರಣೆ ಮಾಡುವುದಕ್ಕೆ ಯಾವುದೇ ನಿಷೇಧ ಹೇರುವುದಿಲ್ಲ. ಆದರೆ, ಈ ಸಂದರ್ಭದಲ್ಲಿ ಮನೋರಂಜನೆಯಾಗಿ ವಾಣಿಜ್ಯ ಉದ್ದೇಶದಿಂದ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಆಯೋಜಿಸುವುದು ಸಮಂಜಸವಾಗಿರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಮನೋರಂಜನೆಗಾಗಿ ವಾಣಿಜ್ಯ ಉದ್ದೇಶದಿಂದ ಆಯೋಜಿಸುವಂತಹ ರೈನ್ ಡ್ಯಾನ್ಸ್, ಪೂಲ್‌ ಡ್ಯಾನ್ಸ್‌ ಗಳಿಗೆ ಸಾರ್ವಜನಿಕ ಹಿತದೃಷ್ಠಿಯಿಂದ ಕಾವೇರಿ ನೀರು ಹಾಗೂ ಬೋರ್ ವೆಲ್ ನೀರು ಬಳಸದಂತೆ ಈ ಮೂಲಕ ಸೂಚನೆ ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
