ಬಳ್ಳಾರಿ:ಮಸ್ಕಿ, ಬಸವ ಕಲ್ಯಾಣ ಮತ್ತು ಬೆಳಗಾವಿಯ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಜಿಂದಾಲ್ ಏರ್ ರ್ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿದ ಅವರು, ಮೂರು ಕಡೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಹೀಗಾಗಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಗೆ ಈಗಾಗಲೇ ಕಳಿಸಲಾಗಿದೆ. ನಾಳೆಯೊಳಗೆ ಅಭ್ಯರ್ಥಿಗಳು ಪಟ್ಟಿ ಅಂತಿಮ ಆಗಲಿದೆ ಎಂದರು.
ರಾಜ್ಯಕ್ಕೆ ಉತ್ತಮ ಬಜೆಟ್ ನೀಡಿದ್ದೆವೆ. ಜನಪರ ಬಜೆಟ್ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದ್ದೇವೆ. ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ಧಿ ನೋಡಿ ಜನರು ನಮಗೆ ಮತ ಹಾಕುವ ವಿಶ್ವಾಸವಿದ್ದು, ಬಿಜೆಪಿ ಪಕ್ಷದ ಹುರಿಯಾಳುಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಕರೊನಾ ತಡೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಅಲ್ಲದೆ, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಗಡಿ ಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಸ್ ವೈ ತಿಳಿಸಿದರು.
ಯುವರತ್ನ ಟ್ರೈಲರ್ ರಿಲೀಸ್: ಯೂ ಟ್ಯೂಬ್​​ನಲ್ಲಿ ಧೂಳೆಬ್ಬಿಸಿದ ಪುನೀತ್!

ಚೀನಾ ಲಸಿಕೆ ತೆಗೆದುಕೊಂಡ ಮಾರನೇ ದಿನವೇ ಕೋವಿಡ್-19 ಸೋಂಕಿಗೆ ತುತ್ತಾದ ಪಾಕ್ ಪ್ರಧಾನಿ ಇಮ್ರಾನ್ ಖಾನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
