ಬೆಂಗಳೂರು:2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ? ಎಂದು ಜಮೀರ್​ ಅಹ್ಮದ್​ ಖಾನ್​ರನ್ನು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ? ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಸರಣಿ ಟ್ವೀಟ್​ ಮೂಲಕ ಛಾಟಿ ಬೀಸಿದ್ದಾರೆ.ಇದನ್ನೂ ಓದಿರಿಕರೊನಾ ಸೋಂಕು: ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು
ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದು ಜಮೀರ್​ಗೆ ಕುಮಾರಸ್ವಾಮಿ ಕುಟುಕಿದ್ದಾರೆ.
2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೆ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ… ಕೇಳಿ ನೋಡಿ ಎಂದಿದ್ದಾರೆ.
2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ… ಕೇಳಿ ನೋಡಿ.6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)March 31, 2021

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ ಎಸ್​.ಎಂ. ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.
ಕರೊನಾ ಸೋಂಕು: ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ನಾನು ನಂದಿ ಅಲ್ಲ, ಜಗದೀಶ! ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ: ಸಿಡಿ ಲೇಡಿ ವಕೀಲರ ಖಡಕ್​ ವಾರ್ನಿಂಗ್​ ಯಾರಿಗೆ?

ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್​ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ

ಮೂರು ಪುಟ್ಟ ಕಂದಮ್ಮಗಳ ಕಣ್ಣೆದುರಲ್ಲೇ ತಾಯಿ ದುರಂತ ಸಾವು! ‘ನನ್ನನ್ನು ಎತ್ತಿಕೊಳ್ಳಮ್ಮಾ…’ ಎಂದು ಶವದ ಮುಂದೆ ಕಣ್ಣೀರಿಟ್ಟ ಮಕ್ಕಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + twenty =
Remember me
