ಬೆಂಗಳೂರು:ಮೂರು ವಿಧಾನಸಭೆ ಕ್ಷೇತ್ರಗಳು, ಒಂದು ವಿಧಾನ ಪರಿಷತ್ ಕ್ಷೇತ್ರ ಉಪಚುನಾವಣೆ ಪೂರ್ವ ತಾಲೀಮಿಗಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳವಾರ ಅಥವಾ ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ತೆರವಾದ ನಾಲ್ಕು ಕ್ಷೇತ್ರಗಳ ಪೈಕಿ ಎರಡು ಬಿಜೆಪಿ, ತಲಾ ಒಂದು ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸೇರಿದ್ದಾಗಿವೆ. ಆದರೆ ಜೆಡಿಎಸ್ ಪಕ್ಷ ಎನ್‌ಡಿಎ ಭಾಗವಾಗಿದ್ದು, ಮುಂದಿನ ಚುನಾವಣೆಗೂ ಮೈತ್ರಿ ಮುಂದುವರಿಕೆ ಎರಡೂ ಪಕ್ಷಗಳ ಬಯಕೆಯಾಗಿದೆ.
ಈ ಹಿನ್ನೆಲೆಯಲ್ಲಿ ವರಿಷ್ಠರ ಸಮಕ್ಷಮವೇ ಸೀಟುಗಳ ಹಂಚಿಕೆ ಹಾಗೂ ಕ್ಷೇತ್ರಗಳ ಹೊಂದಾಣಿಕೆ ಕುರಿತು ಚರ್ಚೆಯೇ ವಿಜಯೇಂದ್ರ ದೆಹಲಿ ದೌಡು ಮುಖ್ಯ ಉದ್ದೇಶವಾಗಿದೆ.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಿ, ಸಲಹೆ-ಸೂಚನೆ ಪಡೆಯುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.
ಚನ್ನಪಟ್ಟಣಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಸಂಡೂರು- ಮಾಜಿ ಸಚಿವ ಬಿ.ಶ್ರೀರಾಮುಲು, ಶಿಲ್ಪಾ ರಾಘವೇಂದ್ರ, ಶಿಗ್ಗಾವಿ- ಭರತ್ ಬೊಮ್ಮಾಯಿ, ಶಶಿಧರ ಎಲಿಗಾರ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 16 =
Remember me
