ಬೆಂಗಳೂರು:ಕರ್ನಾಟಕದಿಂದ ಅಯೋಧ್ಯೆಗೆ ಜನವರಿ 22ರ ಬಳಿಕ 60 ದಿನಗಳ ಅವಧಿಯಲ್ಲಿ 35 ಸಾವಿರಕ್ಕೂ ಹೆಚ್ಚು ರಾಮ ಭಕ್ತರು ಪ್ರಯಾಣಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.
ಇದನ್ನೂ ಓದಿ:ರಶ್ಮಿಕಾ ಜೊತೆ ಮದುವೆ: ವಿಜಯ್ ದೇವರಕೊಂಡ ಹೇಳಿದ್ದೇನು?
ಈ ಕುರಿತಾಗಿ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 31ರಿಂದ ಮಾರ್ಚ್ 25ರ ವರೆಗೆ ರಾಮ ಭಕ್ತರು ಅಯೋಧ್ಯೆಗೆ ಪ್ರಯಾಣ ಮಾಡಲಿದ್ದಾರೆ. ಪ್ರಯಾಣದ ಖರ್ಚು ವೆಚ್ಚವನ್ನು ಅವರೇ ಭರಿಸಲಿದ್ದಾರೆ. ಪ್ರತಿ ರೈಲಿನಲ್ಲೂ 1500 ಜನ ಪ್ರಯಾಣ ಮಾಡಲಿದ್ದು, ಒಟ್ಟು 25 ರೈಲುಗಳ ಮೂಲಕ ಪ್ರಯಾಣ ಮಾಡಲಿದ್ದಾರೆ ಎಂದು ಹೇಳಿದರು.
ಅಯೋಧ್ಯೆ ರಾಮಮಂದಿರ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ‌ ದ್ವಂದ ನಿಲುವು ಹಾಗೂ ಗೊಂದಲ ಇದೆ. ದೇಶದಲ್ಲಿ ರಾಮಜಪ ನಡೆಯುತ್ತಿದ್ದರೆ ಶ್ರೀಕಾಂತ್ ಪೂಜಾರಿಯನ್ನು ಉದ್ದೇಶಪೂರ್ವಕವಾಗಿ ಬಂಧನ ಮಾಡಲಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರು ರಾಮಮಂದಿರ ಆಹ್ವಾನ ತಿರಸ್ಕರಿಸಿದ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಮ ಭಕ್ತರ ಉತ್ಸಾಹಕ್ಕೆ ಅಡ್ಡಿಯಾಗದಂತೆ ರಾಜ್ಯ ಸರ್ಕಾರ ಕೂಡಾ ಸಹಕಾರ ಕೊಡಬೇಕು. ರಾಜ್ಯದ 60 ಕ್ಕೂ ಹೆಚ್ಚು ಪಿವಿಆರ್​​ಗಳಲ್ಲಿ ಪ್ರಾಣ ಪ್ರತಿಷ್ಠೆ ನೇರ ಪ್ರಸಾರ ಇರಲಿದೆ. ಮಂತ್ರಾಕ್ಷತೆ ವಿತರಣೆಗೆ ಜನರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದೆ ಎಂದು ವಿಜಯೇಂದ್ರ ತಿಳಿಸಿದರು.
ರಾಜ್ಯ ಸರ್ಕಾರ ಸಹಕಾರ ನೀಡಲಿ:ರಾಮಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿ ಆತಂಕ ಆಗಬಾರದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಹಕಾರ ಕೊಡಬೇಕು. ಅನೇಕ ಹೇಳಿಕೆಗಳು ಕಾಂಗ್ರೆಸ್ ನಾಯಕರಿಂದ ಬರ್ತಾ ಇದೆ. ಅದರ ಪರಿಣಾಮ ಕೋಲಾರದಲ್ಲಿ ಫ್ಲೆಕ್ಸ್ ಕಿತ್ತು ಹಾಕಲಾಗಿದೆ. ಕೆಲವು ದೇಶ ದ್ರೋಹಿ ಚಟುವಟಿಕೆಗೂ ಅವಕಾಶ ಆಗಬಹುದು, ಅಶಾಂತಿ ಮೂಡಿಸುವ ವಾತಾವರಣ ನಿರ್ಮಾಣ ವಾಗಬಹುದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುಬೇಕು ಸರ್ಕಾರಕ್ಕೆ ಒತ್ತಾಯಿಸಿದರು.
ರಜೆ ಘೋಷಣೆ ಮಾಡಲಿ:ವಿಜಯೇಂದ್ರ ಆಗ್ರಹ: ರಾಮ ಮಂದಿರದಲ್ಲಿನ ಪ್ರಾಣ ಪ್ರತಿಷ್ಠೆ ಸಮಾರಂಭದ ದಿನ ರಾಜ್ಯ ಸರ್ಕಾರ ಸರ್ಕಾರಿ ರಜೆ ಘೋಷಣೆ ಮಾಡಿ ರಾಮ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು. ಈಗಾಗಲೇ ಹಲವು ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಹಾಗಾಗಿ ರಾಜ್ಯದಲ್ಲೂ ರಜೆ ಘೋಷಣೆ ಮಾಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
ರಾಜ್ಯದಲ್ಲಿ ರಾಮಭಕ್ತರಿಗೆ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಏನಾದರೂ ಕಾನೂನು ಸುವ್ಯವಸ್ಥೆ ಸಮಸ್ಯೆಯಾದರೆ ಕಾಂಗ್ರೆಸ್ ಹೊಣೆಯಾಗುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಎಚ್ಚರಿಕೆ ನೀಡಿದರು.
ರಶ್ಮಿಕಾ ಜೊತೆ ಮದುವೆ: ವಿಜಯ್ ದೇವರಕೊಂಡ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 12 =
Remember me
