ಬೆಂಗಳೂರು: ರಾಮಾಯಣವನ್ನು ಪ್ರಶ್ನಿಸುವ, ನಂಬಿಕೆಗಳಿಗೆ ಅನುಮಾನ ಬರುವಂತೆ ಕೇಳುವ ಕಾರ್ಯ ನಡೆದಿದೆ. ಶಾಲೆಗಳಲ್ಲಿ ರಾಮಾಯಣ, ಭಗವದ್ಗೀತೆ, ಮಹಾಭಾರತದ ಕಲಿಕೆಗೆ ಅವಕಾಶವಿಲ್ಲ. ಈ ಮಹಾಕಾವ್ಯಗಳು ನಮ್ಮ ಸಂಸ್ಕøತಿ, ದೇಶದ ನಮ್ಮತನಕ್ಕೆ ಪೂರಕ. ಇವುಗಳ ಸಂಪೂರ್ಣ ತಿಳಿವಳಿಕೆ ಸಿಗಬೇಕು; ಇವುಗಳ ಮನವರಿಕೆ ಆಗಲಿ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ‌ ಹೇಳಿದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು,ರಾಮಾಯಣವು ಎಂದೆಂದೂ ಪ್ರಸ್ತುತ. ಪವಿತ್ರ, ಅಮರ ಮಹಾಕಾವ್ಯವನ್ನು ಮಹರ್ಷಿ ವಾಲ್ಮೀಕಿ ಅವರು ಜನತೆಗೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮನುಷ್ಯನ ಸಾರ್ಥಕ ಬದುಕಿಗೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯವು ಮಾರ್ಗದರ್ಶನ ನೀಡುತ್ತದೆ. ಮಹರ್ಷಿ ವಾಲ್ಮೀಕಿಯವರ ಸ್ಮರಣೆ, ಅವರಿಗೆ ಗೌರವ ನೀಡುವ ಕಾರ್ಯ ಪ್ರತಿನಿತ್ಯ, ಪ್ರತಿಕ್ಷಣವೂ ನಡೆಯಲಿ ಎಂದು ಆಶಿಸಿದರು.
ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪನವರು ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆ ಮತ್ತು ರಜಾದಿನವಾಗಿ ಪ್ರಕಟಿಸಿದ್ದಾಗಿ ಅವರು ನೆನಪಿಸಿದರು. ಯಡಿಯೂರಪ್ಪ ಅವರು ಮತ್ತು ಅಂದಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರ ಪ್ರಯತ್ನದಿಂದ ಈ ಗೌರವ ಸಲ್ಲುತ್ತಿದೆ ಎಂದರು.
ನಮ್ಮ ಸಂಸ್ಕøತಿಯನ್ನು ಕಡೆಗಣಿಸುವ ಕಾರ್ಯ ನಡೆದಿದೆ ಎಂದು ಬೇಸರ ಸೂಚಿಸಿದ ಅವರು, ರಾಮಾಯಣದ ಅಂಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳೋಣ. ಧರ್ಮವನ್ನು ಅರಿಯಲು ಪ್ರಯತ್ನ ಮಾಡೋಣ ಎಂದು ತಿಳಿಸಿದರು. ನೆಚ್ಚಿನ ಪ್ರಧಾನಿ ಮೋದಿಜಿಯವರು ಮತ್ತು ಬಿಜೆಪಿಯು ಎಲ್ಲ ವರ್ಗಗಳ ಸಂಸ್ಕøತಿಯನ್ನು ತಾರತಮ್ಯವಿಲ್ಲದೆ ಎತ್ತಿಹಿಡಿಯುವ ಕಾರ್ಯ ಮಾಡುತ್ತಿವೆ ಎಂದು ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಿವರಿಸಿದರು.
ಮಾಜಿ ಸಚಿವ ಗೋವಿಂದ ಕಾರಜೋಳ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಓಲೆಕಾರ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ನಂಜುಂಡೇಗೌಡ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುಲಿಂಗನ ಗೌಡ, ರಾಜ್ಯ ಕಟ್ಟಡ ಸಮಿತಿ ಸದಸ್ಯ ಡಾ. ಎಂ ನಾಗರಾಜ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ ನಾರಾಯಣಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಕಾರ್ಯಾಲಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × five =
Remember me
