ಬೆಂಗಳೂರು:ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ, ಫೋನ್ ಕರೆ ಮೂಲಕ ಕೆಲವರು ಶುಭಾಶಯ ಕೋರಿದ್ದಾರೆ. ಏತನ್ಮಧ್ಯೆ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಂಸದ ಪಿ.ಸಿ. ಮೋಹನ್, ವಿಜಯೇಂದ್ರ‌ ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಆಸೆಗಳು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರ‌ಗಿದೆ ಎಂದರು.
ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ಜೋರುಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪಟಾಕಿ‌ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಹೆಗಲ‌‌ ಮೇಲೆ ಹೊತ್ತು‌ ಕುಣಿದು ಕುಪ್ಪಳಿಸಿದ್ದಾರೆ. ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ಜೈಕಾರ‌ ಕೂಗಿದ್ದಾರೆ.
ಇನ್ನು ಡಾಲರ್ಸ್ ಕಾಲನಿಯ ಬಿ.ಎಸ್​.ಯಡಿಯೂರಪ್ಪ ನಿವಾಸಕ್ಕೆ ನಿರಾಣಿ, ಸಿದ್ದೇಶ್ವರ್ ಆಗಮಿಸಿ ಬಿ.ವೈ.ವಿಜಯೇಂದ್ರಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮೋದಿಯವರ ಭಾಷಣ ಒಳಗೊಂಡಿರುವ ಮಿಲೆಟ್ಸ್ ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
