ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಕಾಳಮ್ಮ ಮಲ್ಲೇಶಯ್ಯ ಟ್ರಸ್ಟ್‌ ವತಿಯಿಂದ ಶುಕ್ರವಾರ ಸೋಂಪುರ ವರಹಸಂದ್ರದಲ್ಲಿ ಉಚಿತ ಆರೋಗ್ಯ ಚಿಕಿತ್ಸಾಲಯ ಆರಂಭಿಸಲಾಗಿದೆ.
ಈ ಆರೋಗ್ಯ ಚಿಕಿತ್ಸಾಲಯದಲ್ಲಿ ಪ್ರತಿನಿತ್ಯ ಬೆಳಗ್ಗೆ 9ರಿಂದ 11 ಗಂಟೆವರೆಗೆ ಉಚಿತ ಆರೋಗ್ಯ ಪರೀಕ್ಷೆ ನಡೆಯಲಿವೆ.
ರಾಮನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಂ.ರುದ್ರೇಶ್ ಮಾತನಾಡಿ, ಲಾಕ್‌ಡೌನ್ ಸಂದರ್ಭದಲ್ಲಿ ವಿಜೇಯಂದ್ರ ಅವರು ರಾಜ್ಯಾದ್ಯಂತ ಉಚಿತ ಔಷಧ ಹಂಚಿದ್ದರು. ಅವರು ಕೈಗೊಂಡಿರುವ ಸಾಮಾಜಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ನಿರಂತರವಾಗಿ ಆರೋಗ್ಯ ಪರೀಕ್ಷೆಗಳು ನಡೆಯಲಿವೆ. ಅಲ್ಲದೆ, ಬಡವರಿಗೆ ಕುಡಿಯುವ ನೀರಿನ 500 ಕ್ಯಾನ್ ಹಾಗೂ ಮಾಸ್ಕ್​ಗಳನ್ನು ಉಚಿತವಾಗಿ ನೀಡಲಾಯಿತು. ಉಚಿತ ಕೋವಿಡ್ ಪರೀಕ್ಷೆ ಆಯೋಜಿಸಲಾಗಿದೆ. ಜನರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮಾಜಿ ಬಿಬಿಎಂಪಿ ಸದಸ್ಯ ಆರ್ಯ ಶ್ರೀನಿವಾಸ್, ಹೆಮ್ಮೀಗೆಪುರ ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸಂಜೀವ್ ಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಪ್ಪಲತಾ ಪರಮಶಿವಯ್ಯ ಮತ್ತಿತರರಿದ್ದರು.
ಭಿಕ್ಷುಕನಾಗಿ ಚಿಂದಿ ಆಯುತ್ತಿದ್ದ ನಿವೃತ್ತ ಪೊಲೀಸಪ್ಪನಿಗೆ ಹೊಸ ಜೀವನ!

ಆರ್​ ಆರ್​ ನಗರದಲ್ಲಿ ಜೆಡಿಎಸ್​ ಗೆಲ್ಲೋದಿಲ್ಲ ಎಂದ ಎಚ್​ಡಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 17 =
Remember me
