ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿ ಚುಟುಕು ಪ್ರವಾಸವು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಬಿಡುವಿಲ್ಲದ ಸಭೆಗಳ ಬಳಿಕ ಬೆಂಗಳೂರಿಗೆ ಮರಳಿದ್ದ ಅವರು ಶನಿವಾರ ಸಂಜೆ ದೆಹಲಿಗೆ ಭೇಟಿ ನೀಡಿ ತಡರಾತ್ರಿಯೇ ಮರಳಿದ್ದಾರೆ ಎನ್ನಲಾಗಿದ್ದು, ಕಾವೇರಿ ನಿವಾಸದಲ್ಲಿ ಬಿಎಸ್​ವೈ ಅವರನ್ನು ಭೇಟಿಯಾಗಿ ಪ್ರವಾಸದ ವರದಿಯನ್ನು ಒಪ್ಪಿಸಿದ್ದಾರೆ. ಈ ವೇಳೆ ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳ ವಸ್ತುಸ್ಥಿತಿ, ಕೈಗೊಂಡ ಚಟುವಟಿಕೆಗಳು ಹಾಗೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವಿಜಯೇಂದ್ರ ವಿಚಾರ ವಿನಿಮಯ ನಡೆಸಿದರು.
ಚರ್ಚೆಯ ಗಿರಕಿ: ದೆಹಲಿಯಲ್ಲಿ ಯಾವ ನಾಯಕರನ್ನು ಸಿಎಂ ಪುತ್ರ ಭೇಟಿ ಮಾಡಿ, ಏನು ಮಾತುಕತೆ ನಡೆಸಿದರು ಎನ್ನುವುದು ನಿಖರವಾಗಿ ಗೊತ್ತಾಗಿಲ್ಲ. ಆದರೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸುತ್ತ ಚರ್ಚೆಯು ಗಿರಕಿ ಹೊಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಎನ್.ಆರ್. ಸಂತೋಷ್​ಗೂ ಕೊಕ್?:ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್​ಗೂ ಕೊಕ್ ನೀಡುವ ಸಿದ್ಧತೆಗಳು ಸಿಎಂ ಕಚೇರಿಯಲ್ಲಿ ನಡೆದಿವೆ ಎಂಬ ಸುಳಿವು ಹೊರ ಬಿದ್ದಿದೆ. ಆ ಮೂಲಕ ಅವರಾಗಿಯೇ ರಾಜೀನಾಮೆ ನೀಡಬೇಕು ಎಂಬ ಸಂದೇಶ ರವಾನೆಯಾಗಿದೆ. ಇಲ್ಲವಾದರೆ ಹುದ್ದೆಯಿಂದ ಬಿಡುಗಡೆ ಮಾಡುವ ಆದೇಶ ಕೆಲವು ದಿನಗಳಲ್ಲಿ ಹೊರಬೀಳಲಿದೆ ಎಂದು ಮೂಲಗಳು ಹೇಳಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 1 =
Remember me
