ಬೆಂಗಳೂರು:ನಾನು ಯಾವುದೇ ಹುದ್ದೆಗೂ ಆಸೆ ಇಟ್ಟುಕೊಂಡಿಲ್ಲ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಇನ್ನಷ್ಟು ಬಲಪಡಿಸುವೆ ಎಂದು ಬಿಜೆಪಿಯ ನೂತನ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಬಿಜೆಪಿ ಕಚೇರಿಗೆ ಶನಿವಾರ ಭೇಟಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯಾವುದೇ ಹುದ್ದೆಗೂ ಆಸೆ ಪಟ್ಟಿರಲಿಲ್ಲ. ಪಕ್ಷದ ಮುಖಂಡರು ಕೊಟ್ಟಿರುವ ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸುವುದು ನನ್ನ ಜವಾಬ್ದಾರಿ. ಪ್ರಧಾನ ಕಾರ್ಯದರ್ಶಿಗಾಗಿ ಒತ್ತಡ ಹಾಕಿಲ್ಲ. ಯುವ ಮೋರ್ಚಾದಲ್ಲಿದ್ದ ನನಗೆ ಈಗ ಉಪಾಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಉತ್ತಮವಾಗಿ ಕೆಲಸ ಮಾಡಿ ತೋರಿಸುತ್ತೇನೆ. ಯಾವುದೇ ಆಸೆ ಇಟ್ಟುಕೊಂಡಿಲ್ಲದ ಕಾರಣ ಸಹಜವಾಗಿಯೇ ಖುಷಿಯಾಗಿದೆ ಎಂದರು.
ಇದನ್ನೂ ಓದಿರಿಅಧಿಕಾರ, ಹಣಕ್ಕಾಗಿ ಹಲವು ಬಾರಿ ಡಿ.ಕೆ.ಶಿವಕುಮಾರ್​ ನನ್ನ ಕಾಲಿಗೆ ಬಿದ್ದಿದ್ದಾರೆ… ಅದರ ವಿಡಿಯೋ ಇದೆ: ಸಿ.ಪಿ.ಯೋಗೇಶ್ವರ್
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನನ್ನು ಗುರುತಿಸಿದ್ದಾರೆ ಎಂಬುದೇ ಸಂತಸದ ಸಂಗತಿ. ಹೊಸ ಜವಾಬ್ದಾರಿ ಕೊಟ್ಟ ರಾಷ್ಟ್ರೀಯ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ಪಕ್ಷದ ಶಿಸ್ತಿನ ಸಿಪಾಯಿ ಆಗಿ ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.
ಇನ್ನು ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಈ ಬಗ್ಗೆ ಮುಖ್ಯಮಂತ್ರಿ ಅವರನ್ನೇ ಕೇಳಿ. ಅದಕ್ಕೂ ನನಗೂ ಸಂಬಂಧವಿಲ್ಲ. ಸಿಎಂ ದೆಹಲಿಗೆ ಹೋಗುವ ಬಗ್ಗೆಯೂ ಮಾಹಿತಿ ಇಲ್ಲ. ಮುಖ್ಯಮಂತ್ರಿ ಅವರು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
video/ ಸಿ.ಪಿ.ಯೋಗೇಶ್ವರ್​ ಅಭಿನಯದ ‘ಸೈನಿಕ’ ಸಿನಿಮಾ ಹಾಡಿಗೆ ಕುಣಿದು ಕುಪ್ಪಳಿಸಿದ ಕಾಂಗ್ರೆಸ್​ ಕಾರ್ಯಕರ್ತರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 3 =
Remember me
