ದಾವಣಗೆರೆ:ಯಾರು ಕೂಡ ನಿರೀಕ್ಷೆ ಮಾಡದ ರೀತಿಯಲ್ಲಿ ಕಾಂಗ್ರೆಸ್​​ಗೆ ಬಹುಮತ ಸಿಕ್ಕಿದೆ. ಈ ಮೂಲಕ ಆಡಳಿತದ ಗದ್ದುಗೆ ಏರಿರುವುದು ಡಬಲ್ ಸ್ಟೇರಿಂಗ್ ಸರ್ಕಾರ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ಚುನಾವಣಾ ಗೆಲುವಿನ ಬಳಿಕ ಹರಿಹರ ಕನಕ ಗುರುಪೀಠದ ಕನಕ ಶ್ರೀಗಳ ಆಶೀರ್ವಾದ ಪಡೆಯಲು ಬಿ.ವೈ.ವಿಜಯೇಂದ್ರ ಬಂದಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ ಡಬಲ್ ಸ್ಟೇರಿಂಗ್ ಸರ್ಕಾರವಾಗಿದೆ. ಸಿಎಂ ಒಂದು ಕಡೆ, ಡಿಸಿಎಂ ಇನ್ನೊಂದು ಕಡೆ ಸ್ಟೇರಿಂಗ್ ಎಳೆಯುತ್ತಾ ಇದ್ದಾರೆ. ಹೀಗಾಗಿ ಡಬಲ್ ಸ್ಟೇರಿಂಗ್ ಸರ್ಕಾರ ಎಂದು ಹೇಳಿದ್ದೇನೆ ಎಂದರು.
ಇದನ್ನೂ ಓದಿ:VIDEO | ನೂತನ ಸಂಸತ್ ಭವನದಲ್ಲಿ ಮೂಡಿದ ಕನ್ನಡದ ಕಂಪು; ಗೋಡೆ ಮೇಲೆ ಅಚ್ಚೊತ್ತಲಾಗಿದೆ ಬಸವಣ್ಣನವರ ವಚನ!
ಸರ್ಕಾರಕ್ಕೆ ಬಹುಮತ ಸಿಕ್ಕಿದ ಬೆನ್ನಲ್ಲೇ ಮೊದಲ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಹೀಗಾಗಿ ರಾಜ್ಯದ ಕೆಲವೆಡೆ ಜನರು ಬಸ್​ನಲ್ಲಿ ಟಿಕೆಟ್ ತೆಗೆದುಕೊಳ್ಳದೆ ಗಲಾಟೆ ಮಾಡುತ್ತಾ ಇದ್ದಾರೆ. ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಗಲಾಟೆಯಾಗುತ್ತಿದೆ. ಗ್ಯಾರಂಟಿ ಯೋಜನೆ ಬೇಗ ಜಾರಿ ಮಾಡದೇ ಇದ್ದಲ್ಲಿ ರಾಜ್ಯದಲ್ಲಿ ಅರಾಜಕತೆ ಉಂಟಾಗುತ್ತದೆ ಎಂದು ಹೇಳಿದರು.
ವಿರೋಧ ಪಕ್ಷದ ನಾಯಕನಾಗುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಕೇವಲ ಶಿಕಾರಿಪುರದ ಶಾಸಕನಷ್ಟೇ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eighteen =
Remember me
