ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದವನ್ನೇ ಹುಟ್ಟುಹಾಕಿದ್ದ ಮುಡಾ ನಿವೇಶನದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಅಪ್ಡೇಟ್​ ಹೊರಬಿದ್ದಿದೆ. ಮುಡಾ ಸೈಟು ಹಂಚಿಕೆ ಕೇಸ್​ನಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದು ಸಿದ್ದರಾಮಯ್ಯ ಅವರ ಕುರ್ಚಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಈ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ. ಪರಮೇಶ್ವರ್​, ನಾವು ಕಾನೂನಾತ್ಮಕವಾಗಿ ಹೋರಾಟ ಮಾಡ್ತೇವೆ ಎಂದಿದ್ದಾರೆ.
ಇದನ್ನೂ ಓದಿ:ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಕೇಸ್: 5 ಬೇಡಿಕೆಗಳನ್ನು ಮುಂದಿಟ್ಟ ಪ್ರತಿಭಟನಾ ನಿರತ ವೈದ್ಯರು
ಇನ್ನು ಈ ಕುರಿತು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು,  ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ, ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.
ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಸಿಎಂ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯ ನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದರು.
ಕ್ರಿಕೆಟ್​ನ ಸರ್ವನಾಶ ಮಾಡ್ತಿದೆ ಟಿ20 ಫಾರ್ಮೆಟ್! ಇಬ್ಬರು ಸ್ಟಾರ್​ ಆಟಗಾರರ ನಿರ್ಧಾರಕ್ಕೆ ಬಸಿತ್ ಅಲಿ ಕೆಂಡಾಮಂಡಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 3 =
Remember me
