ಬೆಂಗಳೂರು:ಎರಡು ದಿನದ ಹಿಂದಷ್ಟೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ರಾಘವೇಂದ್ರ ಸೋಮವಾರ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರುಗಳನ್ನು ಅವರ ನಿವಾಸಕ್ಕೇ ತೆರಳಿ ಭೇಟಿ ಮಾಡಿದರು.
ಇತ್ತೀಚೆಗೆ ಬೊಮ್ಮಾಯಿ ಅವರು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಬಸವರಾಜ ಬೊಮ್ಮಾಯಿ ಅವರ ಆರ್.ಟಿ.ನಗರ ನಿವಾಸಕ್ಕೆ ತೆರಳಿದ ವಿಜಯೇಂದ್ರ ಅವರ ಆರೋಗ್ಯದ ವಿಚಾರಿಸಿದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಂದ ವಿಜಯೇಂದ್ರ ಅವರನ್ನು ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡು ಕೆಲಕಾಲ ಉಭಯ ಕುಶಲೋಪರಿ ವಿಚಾರಿಸಿದರು.ತಮಗೆ ಎಲ್ಲ ರೀತಿಯಿಂದಲೂ ಮಾರ್ಗದರ್ಶನ, ಸಹಕಾರ ನೀಡವುದಾಗಿ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.ಬಳಿಕ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಷ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.ಲೋಕಸಭಾ ಸದಸ್ಯಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ತಮ್ಮಣ್ಣ ಮತ್ತಿತರರು ವಿಜಯೇಂದ್ರ ಅವರನ್ನು ಬರಮಾಡಿಕೊಂಡರು.
ದೇವೇಗೌಡರು ತಮ್ಮ ನಿವಾಸಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರಿಗೆ ಶಾಲು ಹೊದಿಸಿ ಗಂಧದ ಹಾರ ಹಾಕಿ ಶುಭ ಕೋರಿದರು. ಜತೆಗೆ ಉಭಯ ಕುಶಲೋಪರಿ ವಿಚಾರಿಸಿದರಲ್ಲದೆ, ರಾಜ್ಯದ ರಾಜಕೀಯ, ಪಕ್ಷ ಸಂಘಟನೆ ಬಗ್ಗೆ ಇಡಬೇಕಾಗಿರುವ ಹೆಜ್ಜೆ, ಲೋಕಸಭೆ ಚುನಾವಣೆಯ ಸವಾಲಿನ ಕುರಿತು ತುಸು ಚರ್ಚೆ ನಡೆಸಿದರು. ತರುವಾಯ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿಕೊಟ್ಟ ವಿಜಯೇಂದ್ರ, ಅವರಿಂದಲೂ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಂ.ಕೃಷ್ಣ, ಯುವಕನಿಗಿ ಜವಬ್ದಾರಿ ಕೊಟ್ಟಿದ್ದಾರೆ. ನೂತನವಾಗಿ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆ ಆಗಿರುವ ವಿಜಯೇಂದ್ರ ಅವರನ್ನು ನಾನು ಹಾರ್ದಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ ಹತ್ತಾರು ವರ್ಷಗಳಿಂದ ಬಿಜೆಪಿ ಭದ್ರ ಬುನಾದಿ ಹಾಕಿ ಯಡಿಯೂರಪ್ಪ ಪಕ್ಷ ಬೆಳೆಸಿದ್ದಾರೆ. ಈಗ ವಿಜಯೇಂದ್ರ ಆ ಜವಾಬ್ದಾರಿ ಹೊತ್ತಿದ್ದಾರೆ.ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ ತಮ್ಮ ಛಾಪನ್ನು ವಿಜಯೇಂದ್ರ ತೋರಿಸಬೇಕು.ಮೋದಿ ಹಾಗೂ ನಡ್ದಾ ಅವರು ವಿಜಯೇಂದ್ರ ಅವರ ಪ್ರತಿಭೆ ಗುರುತಿಸಿ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಹಿರಿಯರಾದ ನಾವು ಸಮನ್ವಯ ಸಾಧಿಸಿಕೊಂಡು ಹೋಗಬೇಕಾಗುತ್ತದೆ. ಯುವಕರು ಹೊರಹೊಮ್ಮಬೇಕು. ಅವರ ಕೈಗಳನ್ನು ಬಲಪಡಿಸಬೇಕು, ಮಾರ್ಗದರ್ಶನ ನೀಡಬೇಕು.ಅವರ ಜತೆಯಲ್ಲಿ ನಾವು ನಡೆಯಬೇಕು ಎಂದು ಹೇಳಿದರು.
ಪಕ್ಷದ ಸಂಘಟನೆ ವಿಷಯದಲ್ಲಿ ತಮ್ಮನ್ನು ಯಾವಾಗಲಾದರೂ ಭೇಟಿ ಮಾಡಿದರೂ ಅಗತ್ಯ ಸಲಹೆ, ಮಾರ್ಗದರ್ಶನ ಮಾಡುವುದಾಗಿ ಎಸ್.ಎಂ.ಕೃಷ್ಣ ಆಶ್ವಾಸನೆ ನೀಡಿದರು.
ಮಾಜಿ ಸಚಿವರಾದ ಸುರೇಶ್ ಕುಮಾರ್ ಮತ್ತು ಗೋವಿಂದ ಕಾರಜೋಳ ಅವರು ವಿಜಯೇಂದ್ರ ಅವರನ್ನು ಅಭಿನಂದಿಸಿದರು. ಬಳಿಕ ವಿಜಯೇಂದ್ರ ಅವರು ಪದ್ಮನಾಭನಗರದ ಬಿಜೆಪಿ ಕಾರ್ಯಕರ್ತ ಶಿವನಂಜಪ್ಪ ಅವರ ಮನೆಗೆ ಭೇಟಿ ನೀಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ವಿಜಯೇಂದ್ರ ಅವರು ಭಾನುವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಬಳಿಕ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದರು.
ಮಂಗಳವಾರ ಕಾರ್ಯಕ್ರಮಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಮುಳಬಾಗಿಲು ತಾಲೂಕು ಕುರುಡುಮಲೆ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಅಲ್ಲಿಯೇ ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡಲಿದ್ದಾರೆ.——————————–
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + fourteen =
Remember me
