ಬೆಂಗಳೂರು :ಬೆಂಗಳೂರಿನ ವಿಶ್ವಕರ್ಮ ಸೇವಾ ಸಮಿತಿ ವತಿಯಿಂದ ಫೆ. 22ಕ್ಕೆ ವಿಶ್ವಕರ್ಮ ಬ್ರಹ್ಮ ರಥೋತ್ಸವ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ನಗರ್ತಪೇಟೆಯಲ್ಲಿರುವ ಶ್ರೀಕಾಳಿಕಾಂಬ ಕಮ್ಮಠೇಶ್ವರ ದೇವಾಲಯದಲ್ಲಿ ಬೆಳಗ್ಗೆ ವಿಶ್ವಕರ್ಮ ಬ್ರಹ್ಮ ರಥೋತ್ಸವವು ವಿವಿಧ ಮಂಗಳವಾದ್ಯ ಮತ್ತು ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಸಂಜೆ 4 ಗಂಟೆಗೆ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ವಿಶ್ವಕರ್ಮ ಜನಜಾಗೃತಿ ಸಮಾವೇಶ ನಡೆಯಲಿದೆ.
ಕಾರ್ಯಕ್ರಮದಲ್ಲಿ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನಮೂರ್ತಿ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ವಿವಿಧ ಮಠಗಳ ಶ್ರೀಗಳು ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ಸಚಿವರು, ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಇದೇ ವೇಳೆ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ರಾಷ್ಟ್ರಮಟ್ಟದ ವಿಶ್ವಕರ್ಮ ಸೇವಾರತ್ನ ಪ್ರಶಸ್ತಿ ಮತ್ತು ಕುಶಲಕರ್ಮಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ಸ್ಥಾಪಿಸಲ್ಪಟ್ಟಿರುವ ಬಾಲರಾಮನ ಮೂರ್ತಿಯನ್ನು ನಿರ್ಮಿಸಿರುವ ಮೈಸೂರಿನ ಅರುಣ್ ಯೋಗಿರಾಜ್ ಸೇರಿದಂತೆ ವಿವಿಧ ಸಾಧಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × three =
Remember me
