ಬೆಂಗಳೂರು:ಕರೊನಾ ಕಠಿಣ ನಿಯಮಗಳ ಸಮಯದಲ್ಲಿ, ಜನರ ನಿಯಂತ್ರಣಕ್ಕೆ ರಸ್ತೆಗಿಳಿದು ಕೆಲಸ ಮಾಡುತ್ತಿರುವ ಪೊಲೀಸರ ಮೇಲೂ ಕರೊನಾ ದಾಳಿ ಮುಂದುವರಿಸಿದೆ. ಇದೀಗ ಬ್ಯಾಟರಾಯನಪುರ ಪೊಲೀಸ್​ ಠಾಣೆಯ ಎಎಸ್​ಐ ಮುನಿಯಪ್ಪ (58) ಕರೊನಾ ಸೋಂಕಿಗೆ ತುತ್ತಾಗಿ ಬಲಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಬ್ಯಾಟರಾಯನಪುರ ಪೊಲೀಸ್​ ಠಾಣೆಯಲ್ಲಿ ಕರೊನಾ ಪರೀಕ್ಷೆ ನಡೆಸಲಾಗಿತ್ತು. ಆ ವೇಳೆ ಮುನಿಯಪ್ಪ ಅವರಿಗೆ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ತೀವ್ರ ಉಸಿರಾಟದ ತೊಂದರೆಯಿಂದ ಭಾನುವಾರ ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 2016ರಿಂದ ಬ್ಯಾಟರಾಯನಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಸಾವಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಪೊಲೀಸ್​ ಇಲಾಖೆ ಇತರ ಪೊಲೀಸ್​ ಸಿಬ್ಬಂದಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಪೊಲೀಸ್​ ಠಾಣೆಯೇ ಸೀಲ್​ ಡೌನ್​:ಬ್ಯಾಟರಾಯನಪುರ ಪೊಲೀಸ್​ ಠಾಣೆಯ 26 ಪೊಲೀಸ್​ ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಶನಿವಾರದಿಂದ ಠಾಣೆಯನ್ನೇ ಸೀಲ್​ಡೌನ್​ ಮಾಡಲಾಗಿದೆ. ಇವರೆಲ್ಲರೂ ಸೂಕ್ತ ಮುನ್ನೆಚ್ಚರಿಕೆ ವಹಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಟರಾಯನಪುರ ಪೊಲೀಸ್​ ಠಾಣೆಯನ್ನು ಸದ್ಯ ಸಮೀಪದಲ್ಲಿರುವ ಕಲ್ಯಾಣ ಮಂಟಪಕ್ಕೆ ಸ್ಥಳಾಂತರಿಸಲಾಗಿದೆ.
ಮದ್ವೆಗೆ ಬಂದವರ ಮೂಗಿಗೆ ನಿಂಬೆರಸ! ಧಾರವಾಡದಲ್ಲಿ ಗಮನ ಸೆಳೆದ ವಿವಾಹ

ಕರೊನಾ ಭಯದಿಂದ ಅಮ್ಮನನ್ನು ಅಕ್ಕನ ಮನೆ ಎದುರು ಮಲಗಿಸಿ ಬಂದ; ಹೆತ್ತವಳನ್ನು ರಸ್ತೆಯಲ್ಲೇ ಮಲಗಿಸಿದ ಮಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fifteen =
Remember me
