ಬೆಂಗಳೂರು:ಬಸವಕಲ್ಯಾಣ ಮತ್ತು ಮಸ್ಕಿ ಉಪಚುನಾವಣೆಗೆ ಇನ್ನೊಂದು ವಾರದೊಳಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ತಾಲೀಮು ಆರಂಭಿಸಿದೆ. ಕಳೆದ ವಾರವೇ ಬಿಜೆಪಿ ಎರಡು ಕ್ಷೇತ್ರಕ್ಕೆ ಉಸ್ತುವಾರಿಗಳನ್ನು ಕಳಿಸಿಕೊಟ್ಟಿತ್ತು. ಆದರೆ, ರಾಜರಾಜೇಶ್ವರಿನಗರ ಹಾಗೂ ಶಿರಾ ಉಪಚುನಾವಣೆ ಸೋಲಿನಿಂದ ಕಂಗಾಲಾಗಿದ್ದ ಕಾಂಗ್ರೆಸ್ ಮಂಕಾಗಿ ಉಳಿದಿತ್ತು.
ಇದೀಗ ಮುಂದಿನ ಎರಡು ಕ್ಷೇತ್ರದಲ್ಲಾದರೂ ಆಡಳಿತಾರೂಢ ಪಕ್ಷಕ್ಕೆ ಎದಿರೇಟು ನೀಡಬೇಕೆಂದು ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚುನಾವಣೆ ನೇತೃತ್ವ ತೆಗೆದುಕೊಂಡಿದ್ದಾರೆ. ನ.22ರಂದು ಹೊಸಪೇಟೆಗೆ ತೆರಳಿ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವ ಅವರು, 23ರಂದು ಬೆಳಗ್ಗೆ 11 ಗಂಟೆಗೆ ಮಸ್ಕಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು.
ಇದನ್ನೂ ಓದಿ:ಪ್ರಧಾನಿ ಮೋದಿಯವರ ‘ಆತ್ಮನಿರ್ಭರ ಭಾರತ’ದ ಕರೆಗೆ ಆಧ್ಯಾತ್ಮಿಕ ನಾಯಕರ ಬೆಂಬಲ
ಜತೆಗೆ ಕಳೆದ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಸವನಗೌಡ ತುರುವಿಹಾಳ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವರು. ಸಂಜೆ ಕ್ಷೇತ್ರದ ಕಾರ್ಯಕರ್ತರು, ಮುಖಂಡರನ್ನು ಭೇಟಿ ಮಾಡಿ ಚುನಾವಣೆಗೆ ಅವರನ್ನೆಲ್ಲ ಅಣಿಗೊಳಿಸಲಿದ್ದಾರೆ. ನ.24ರಂದು ಮಧ್ಯಾಹ್ನ ಬಸವಕಲ್ಯಾಣ ಕ್ಷೇತ್ರಕ್ಕೆ ಭೇಟಿ ನೀಡಿ ಕಾರ್ಯಕರ್ತರ ಸಭೆ ನಡೆಸುವರು.
ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆಯೇ ಈ ಸಲ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eleven =
Remember me
