ಹಾಸನ:ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಮೂಡಬಹುದೆಂಬ ಆತಂಕದಿಂದ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಹಾಗೇನು ಇಲ್ಲವೆಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಹೇಳಿದ್ದಾರೆ.
ಬುಧವಾರ ಹಾನಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂತ್ರಿ ಮಂಡಲ ವಿಸ್ತರಣೆ ವಿಚಾರದಲ್ಲಿ ಕಗ್ಗಂಟೇನು ಇಲ್ಲ. ಮಂತ್ರಿ ಮಂಡಲ ವಿಸ್ತರಣೆಯಾಗಲಿದೆ. ಸಿಎಂಗೆ ಎಲ್ಲ ಅಧಿಕಾರವಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತಾರೆ ಎಂದರು.
ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದಿದೆ. ಹೀಗಾಗಿ ಸೋತವರ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಮಾಡುತ್ತಾರೆ ಎನ್ನುವ ಮೂಲಕ ಸೋತವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಡಿಸಿಎಂ ಅಶ್ವಥ್​ ನಾರಾಯಣ್​ ಉಲ್ಟಾ ಹೊಡೆದರು.
ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರಿಗೂ ಒಳ್ಳೆಯದಾಗಲಿದೆ. ನಮ್ಮ ಪಕ್ಷ ಎಲ್ಲರಿಗೂ ಒಳ್ಳೆಯದು ಮಾಡಲಿದೆ. ಸುಪ್ರೀಂಕೋರ್ಟ್ ಹೇಳಿರುವ ಪ್ರಕಾರ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕು ಎಂದಿದೆ ಎಂದರು.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + eighteen =
Remember me
