ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿದ್ದರೆ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಅಭಿಮಾನಿಯೊನ್ನ ಪತ್ರ ಬರೆದಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪತ್ರ ವೈರಲ್ ಆಗಿದೆ.
ನಲ್ಲೂರುಮೋಳೆಯ ಚಂದ್ರಶೇಖರ್ ಪತ್ರ ಬರೆದಿರುವ ಅಭಿಮಾನಿ. “ನಮ್ಮ ಉಪ್ಪಾರ ಸಮಾಜದ ಏಕೈಕ ಶಾಸಕ, ನಾಲ್ಕು ಬಾರಿ ಗೆದ್ದಿರುವ ಸಿ.ಪುಟ್ಟರಂಗಶೆಟ್ಟಿಗೆ ಕಾಂಗ್ರೆಸ್ ಸಚಿವ ಸ್ಥಾನ ಕೊಡದಿದ್ದರೆ ನಾನು ಚಂದ್ರಶೇಖರ್ s/o ನಂಜುಂಡಶೆಟ್ಟಿ ನಲ್ಲೂರುಮೋಳೆ ಕಾಂಗ್ರೆಸ್ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದು. ನಂಬಿಕೆ ದ್ರೋಹದ ಕೆಲಸವನ್ನು ಕಾಂಗ್ರೆಸ್ ಮತ್ತು ಹೈಕಮಾಂಡ್ ಮಾಡಿದೆ.‌ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ‌ ಕೊಡದಿದ್ದರೆ ಜಿಲ್ಲಾ ಅಥವಾ ಕೆಪಿಸಿಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ.
ಇದನ್ನೂ ಓದಿ:ಡೆಪ್ಯುಟಿ ಸ್ಪೀಕರ್​ ಆಗಲು ಒಲ್ಲದ ಮನಸ್ಸು, ಸಿದ್ದು ಒತ್ತಾಯಕ್ಕೆ ಒಪ್ಪಬೇಕಷ್ಟೇ ಎಂದ ಸಿ.ಪುಟ್ಟರಂಗಶೆಟ್ಟಿ…
ನನ್ನ ಆತ್ಮಹತ್ಯೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರೇ ಕಾರಣಕರ್ತರು. ನನ್ನ‌ ಸಾವಿನಲ್ಲೂ ಸಹ ನಮ್ಮ ಉಪ್ಪಾರ ಸಮಾಜ ನಿಮ್ಮ ಪಕ್ಷವನ್ನು ಬಿಟ್ಟು ಉಗ್ರ ಹೋರಾಟ ಮಾಡುತ್ತದೆ ಎಂದು ಪತ್ರದಲ್ಲಿ ಬರೆದಿದೆ.
ಈ ಬಗ್ಗೆ ಮಾತನಾಡಿರುವ 21 ವರ್ಷದ ಚಂದ್ರಶೇಖರ್, ನಾನು ಪುಟ್ಟರಂಗಶೆಟ್ಟಿ ಅವರ ಪಕ್ಕಾ ಅಭಿಮಾನಿ. ಇಂದು ಬೆಳಗ್ಗೆ ಕಾಂಗ್ರೆಸ್ ಕಚೇರಿಗೆ ನನ್ನ ಪತ್ರವನ್ನು ತಲುಪಿಸುತ್ತೇನೆ. ಉಪಸಭಾಪತಿ ಸ್ಥಾನಬೇಡ. ಉಪ್ಪಾರ ಸಮಾಜದಲ್ಲಿ ನಾಲ್ಕು, ಐದು ಶಾಸಕರಿದ್ದಿದ್ದರೆ‌ ಈ ಸ್ಥಾನ ಸ್ವೀಕಾರ ಮಾಡಬಹುದಿತ್ತು. ಆದರೆ‌ ಒಬ್ಬರೇ ಇರುವುದರಿಂದ ಸಚಿನ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಹಿನ್ನೆಲೆ ಸಂಚಾರದಲ್ಲಿ ಬದಲಾವಣೆ

ಐಫೋನ್​ ಗಿಫ್ಟ್​ ಕೊಡಲು ನಿರಾಕರಿಸಿದ ಬಾಯ್​ಫ್ರೆಂಡ್​ಗೆ ಬಿಗ್​ ಶಾಕ್​ ಕೊಟ್ಟ ಗರ್ಲ್​ಫ್ರೆಂಡ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − two =
Remember me
