ಬೆಂಗಳೂರು:ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ. ಹೈಕಮಾಂಡ್ ಯಾವಾಗ ಸೂಚನೆ ನೀಡುತ್ತೋ ಆ ಕೂಡಲೇ ಕೆಳಗಿಳಿಯುತ್ತೇನೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಸಿ.ಟಿ.ರವಿ ಅವರನ್ನು ಶನಿವಾರ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೈಕಮಾಂಡ್​ ಆಯ್ಕೆ ಮಾಡಿದೆ. ಈ ಬೆನ್ನಲ್ಲೇ ಮಾತನಾಡಿರುವ ಸಿ.ಟಿ.ರವಿ, ನನಗೆ ಸಚಿವ ಸ್ಥಾನಕ್ಕಿಂತ ಸಂಘಟನೆಯೇ ಮುಖ್ಯ. ನನ್ನ ಪ್ರಮುಖ ಆಯ್ಕೆ ಪಕ್ಷ ಸಂಘಟನೆ. ಹೈಕಮಾಂಡ್ ಸೂಚಿಸಿದ ತಕ್ಷಣ ಸಚಿವ ಸ್ಥಾನದಿಂದ ಕೆಳಗಿಳಿಯುತ್ತೇನೆ ಎಂದು ಹೇಳಿದ್ದಾರೆ.ಇದನ್ನೂ ಓದಿರಿನಾರಾಯಣರಾವ್ ಉತ್ತರಾಧಿಕಾರಿ ಯಾರು ?
ನಾನು ಪ್ರಧಾನ ಕಾರ್ಯದರ್ಶಿ ಸ್ಥಾನವನ್ನ‌ ನಿರೀಕ್ಷೆ ಮಾಡಿರಲಿಲ್ಲ. ಯಾವುದೇ ಆಸೆ ಇಟ್ಟುಕೊಂಡು ಕೆಲಸ ಮಾಡಿದವನಲ್ಲ. ಅನಂತ್ ಕುಮಾರ್ ಇಂತಹ ಹುದ್ದೆಯಲ್ಲಿದ್ದರು. ಅವರ ಎತ್ತರಕ್ಕೆ ನಾನು ಬೆಳೆಯೋಕೆ ಆಗಲ್ಲ. ಆದರೆ ಅವರ ಎತ್ತರಕ್ಕೆ ಬೆಳೆಯುವ ಪ್ರಯತ್ನ ಮಾಡುತ್ತೇನೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.
ಪಕ್ಷ ನಿಷ್ಠೆ, ಪರಿಶ್ರಮದ ಸೂತ್ರ ನನ್ನದು. ಪಕ್ಷ ನಿಷ್ಠೆಯನ್ನ ಇಲ್ಲಿಯವರೆಗೂ ಬಿಟ್ಟಿಲ್ಲ. ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸಿದ್ದೇನೆ. ನಮ್ಮ ಪಕ್ಷದಲ್ಲಿ ಮಾತ್ರ ಇಂತಹ ಅವಕಾಶ ಸಿಗುತ್ತೆ. ನಾನು ಮಾತೃ ಸ್ಥಾನದಲ್ಲೇ ಇರುವವನು. ದೆಹಲಿ ಮಟ್ಟದಲ್ಲಿ ನಾನು ರಾಜಕಾರಣ ಮಾಡಲ್ಲ. ರಾಜ್ಯ ಮಟ್ಟದಲ್ಲಿಯೇ ಇರುವೆ. ಪ್ರೊಡಕ್ಷನ್ ಯೂನಿಟ್​ನಲ್ಲಿ ಕೆಲಸ ಮಾಡುವೆ ಎಂದು ತಿಳಿಸಿದರು.
ದಿನೇಶ್ ಗುಂಡೂರಾವ್​ಗೆ ಕರೊನಾ, ಸದನಕ್ಕೆ ಬಂದವರಲ್ಲಿ ಆತಂಕ

ಮೈಸೂರಲ್ಲಿ ನಕಲಿ ಡಾಕ್ಟರೇಟ್ ದಂಧೆ, ಶಾಸಕನ ಗೌರವ ಡಾಕ್ಟರೇಟ್ ತಡೆದ ಡಿಸಿಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 8 =
Remember me
