ಬೆಂಗಳೂರು:ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ 24,347 ಶಾಲೆಗಳಿಗೆ ಪುಸ್ತಕ ಹಾಗೂ ನಿಯತಕಾಲಿಕೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಹಾಗೂ 50 ಕೋಟಿ ರೂ.ವೆಚ್ಚದಲ್ಲಿ 47 ಕಸ್ತೂರಬಾ ವಸತಿ ಶಾಲೆಗಳ ದುರಸ್ತಿ ಹಾಗೂ ಸ್ಮಾರ್ಟ್ ಕ್ಲಾಸ್ ರೂಂ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ, 2023-24ನೇ ಸಾಲಿಗೆ 17 ಜಿಲ್ಲೆಗಳ 93 ಮಹತ್ವಾಕಾಂಕ್ಷಿ ತಾಲೂಕುಗಳಲ್ಲಿನ 24,347 ಶಾಲೆಗಳಿಗೆ ಈ ಯೋಜನೆ ಪ್ರಯೋಜನ ದೊರೆಯಲಿದೆ. ಈ ಪೈಕಿ 14,049 ಕಿರಿಯ ಪ್ರಾಥಮಿಕ, 8344 ಸರ್ಕಾರಿ ಹಿರಿಯ ಪ್ರಾಥಮಿಕ, 1830 ಸರ್ಕಾರಿ ಪ್ರೌಢ ಶಾಲೆ, 76 ಕರ್ನಾಟಕ ಪಬ್ಲಿಕ್ ಸ್ಕೂಲ್ ಸೇರಿವೆ. ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕಸ್ತೂರಬಾ ಗಾಂಧಿ ಬಾಲಿಕೆ ಹಾಸ್ಟೆಲ್‌ಗಳಲ್ಲಿ ಡಾರ್ಮಿಟರಿ ನಿರ್ಮಾಣ, ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್ ರೂಂ ಅಭಿವೃದ್ಧಿ ಹಾಗೂ ವಸತಿ ಶಾಲೆ ಮತ್ತು ಹಾಸ್ಟೆಲ್‌ಗಳಿಗೆ ಬಂರ್ ಕಾಟ್ ಗಳ ಖರೀದಿ ಒಟ್ಟು ರೂ.50 ಕೋಟಿಗಳ ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + fourteen =
Remember me
