ಬೆಂಗಳೂರು: ಕರೊನಾ ಸೋಂಕು ವ್ಯಾಪಿಸುತ್ತಿರುವಂತೆಯೇ ಲಾಕ್​ಡೌನ್ ಮುಂದುವರಿಕೆ ವಿಚಾರ ಚರ್ಚೆಯಲ್ಲಿರುವಂತೆಯೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಿದೆ. ಇದರಂತೆ, ಸಚಿವರು ಮತ್ತು ಶಾಸಕರ ವೇತನದಲ್ಲಿ ಶೇಕಡ 30 ಕಡಿತದ ಪ್ರಸ್ತಾವನೆಗೆ ಅಂಕಿತವೂ ಬಿದ್ದಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಸಚಿವ ಮಾಧುಸ್ವಾಮಿ, ಶಾಸಕರು ಮತ್ತು ಸಚಿವರ ವೇತನದಲ್ಲಿ ಶೇಕಡ 30 ಕಡಿತ ಮಾಡುವುದರಿಂದ ಉಳಿತಾಯವಾಗುವ 15 ಕೋಟಿ 36 ಲಕ್ಷ ರೂಪಾಯಿಯನ್ನು ಕರೊನಾ ನಿಧಿಗೆ ಸೇರಿಸಿ ಬಳಸಲಾಗುತ್ತದೆ. ಈ ಸಂಬಂಧ ಶೀಘ್ರವೇ ಅಧಿಕೃತ ಸೂಚನೆ ಪ್ರಕಟವಾಗಲಿದೆ. ಇನ್ನು ಕುಡಿಯುವ ನೀರಿಗಾಗಿ 49 ಬರಪೀಡಿತ ತಾಲೂಕುಗಳಿಗೆ ತಲಾ 1 ಕೋಟಿ ರೂಪಾಯಿ ಹಾಗೂ ಗ್ರಾಮೀಣ ಪಟ್ಟಣ ಪಂಚಾಯಿತಿಗಳಿಗೆ ತಲಾ 50 ಲಕ್ಷ ರೂಪಾಯಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಇದೇ ರೀತಿ, ಈ ಸಂಕಷ್ಟಮಯ ಸನ್ನಿವೇಶದಲ್ಲಿ ಬಿಪಿಎಲ್ ಕಾರ್ಡಿಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದು ಕಾರ್ಡ್ ಲಭಿಸದೇ ಇರುವ ಅಂದರೆ ರಿಜೆಕ್ಟ್ ಆದವರನ್ನು ಹೊರತುಪಡಿಸಿ ಉಳಿದ ಎರಡು ಲಕ್ಷ ಅರ್ಜಿದಾರರಿಗೆ ಎರಡು ತಿಂಗಳ ಪಡಿತರ ಉಚಿತವಾಗಿ ವಿತರಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೂ ಬೆಳೆಗಾರರಿಗೆ ಆಗಿರುವ ನಷ್ಟವನ್ನು ಅಂದಾಜಿಸಲು ಮೊದಲು ಸಮೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಸೂಕ್ರ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು. ಇನ್ನು, ಬಗರ್​ಹುಕುಂ ಭೂಮಿ- 94 ಎ ಅಡಿ ಭೂಮಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿರುವ ವಿಚಾರ ಇತ್ಯರ್ಥವಾಗುವ ತನಕ ಅವರ ಮೇಲೆ ಕೇಸ್ ಹಾಕುವುದಿಲ್ಲ ಎಂದು ಸಚಿವರು ಹೇಳಿದರು.
ಲಾಕ್​ಡೌನ್ ಮುಂದುವರಿಕೆ ತೀರ್ಮಾನ ನಾಳೆ ಎಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 3 =
Remember me
