ನರಗುಂದ:ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಂದ ಎಲ್ಲರಿಗೂ ಸಂತೋಷವಾಗಿದೆಯೇ ಹೊರತು ಬಿಜೆಪಿಯ ಯಾವುದೇ ಶಾಸಕ, ಸಚಿವರಲ್ಲಿ ಅಸಮಾಧಾನ ಇಲ್ಲ. 17 ಜನ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಿರುವುದನ್ನು ಯಾರೂ ಮರೆಯುವಂತಿಲ್ಲ ಎಂದು ಗಣಿ, ಭೂವಿಜ್ಞಾನ ಹಾಗೂ ಅರಣ್ಯ-ಪರಿಸರ ಖಾತೆ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಪಟ್ಟಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ಇತ್ತೀಚೆಗೆ ಸಂಪುಟ ವಿಸ್ತರಣೆ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಎಲ್ಲ ಸಚಿವರು ಕೂಡಿಕೊಂಡು ಹೊಂದಾಣಿಕೆಯಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತೇವೆ. ಎಂಟಿಬಿ ನಾಗರಾಜ ಹಾಗೂ ಎಚ್. ವಿಶ್ವನಾಥ ಅವರ ರಾಜಕೀಯ ಭವಿಷ್ಯದ ಬಗ್ಗೆ ರ್ಚಚಿಸಲು ಪಕ್ಷದ ವರಿಷ್ಠರಿದ್ದಾರೆ. ಆದರೆ, ಈ ವಿಚಾರದ ಕುರಿತು ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದರು.
ಯಡಿಯೂರಪ್ಪ ಅಸಮರ್ಥರಲ್ಲ:
ಸಚಿವ ಸಂಪುಟದ ನಂತರ ಖಾತೆ ಹಂಚಿಕೆಯಲ್ಲಿ ಯಡಿಯೂರಪ್ಪ ಅಸಮರ್ಥರಾಗಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಶೋಭೆ ತರುವಂತದ್ದಲ್ಲ. ಯಾವ ಸಚಿವರಿಗೆ ಯಾವ ಖಾತೆ ಕೊಡಬೇಕು. ಸಂಪುಟದಲ್ಲಿ ಯಾರನ್ನು ಇಟ್ಟುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ಪರಮಾಧಿಕಾರಕ್ಕೆ ಬಿಟ್ಟದ್ದು. ಯಾವುದೇ ಸರ್ಕಾರದ ಮಂತ್ರಿ ಮಂಡಲದಲ್ಲಿ ಖಾತೆ ಹಂಚಿಕೆ ಮಾಡುವಾಗ ಕೆಲ ಸಣ್ಣ ಪುಟ್ಟ ಗೊಂದಲಗಳು ಇದ್ದೇ ಇರುತ್ತವೆ. ಅದು ಮಾಜಿ ಸಿಎಂ ಸಿದ್ದರಾಮಯ್ಯನವರಿಗೂ ಗೊತ್ತಿರುವ ಸಂಗತಿ. ಆದರೆ, ಯಡಿಯೂರಪ್ಪ ಅಸಮರ್ಥರು ಅನ್ನುವುದನ್ನು ಯಾರೂ ಒಪ್ಪುವುದಿಲ್ಲ. ಸ್ವತ: ಸಿದ್ದರಾಮಯ್ಯನವರ ಮನಸ್ಸೇ ಒಪ್ಪುವುದಿಲ್ಲ. ಸಾಕಷ್ಟು ಹೋರಾಟದ ಮೂಲಕವೇ ಬಿಎಸ್​ವೈ ಅವರು ತಮ್ಮ ರಾಜಕೀಯ ಜೀವನ ಕಟ್ಟಿಕೊಂಡು ಮುಖ್ಯಮಂತ್ರಿಗಳಾಗಿದ್ದಾರೆ. ಸುಮ್ಮನೇ ರಾಜಕಾರಣಕ್ಕಾಗಿ ಟೀಕೆ ಮಾಡಬೇಕು. ಹೀಗಾಗಿ ಸಿದ್ದರಾಮಯ್ಯ ಟೀಕೆ ಮಾಡಿರಬಹುದು ಎಂದು ತಿರುಗೇಟು ನೀಡಿದರು.
ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ನನಗೆ ಗಣಿ, ಭೂವಿಜ್ಞಾನ ಮತ್ತು ಅರಣ್ಯ-ಪರಿಸರದ ಮಹತ್ವದ ಖಾತೆಗಳನ್ನು ಬಿಎಸ್​ವೈ ಅವರು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವರು ನನಗೆ ಯಾವ ಖಾತೆಯಲ್ಲಿ ಮುಂದುವರಿಯಲು ಸೂಚಿಸುತ್ತಾರೋ ಆ ಖಾತೆಯಲ್ಲಿ ನಾನು ಮುಂದುವರಿಯುತ್ತೇನೆ. ಆದರೆ, ಬಿಜೆಪಿ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ನಮ್ಮ ಪಕ್ಷದ ಕೆಲವರು ಮಂತ್ರಿ ಮಾಡಿ ಅಂತಾ ಸಿಎಂ ಅವರನ್ನು ಕೇಳುತ್ತಿದ್ದಾರೆ. ಆದರೆ, ಬಸವರಾಜ ಹೊರಟ್ಟಿ ಅವರು ಅದನ್ನೇ ಗುಂಪುಗಾರಿಕೆ ಎಂದು ಹೇಳುತ್ತಿರುವುದು ಶುದ್ಧ ಸುಳ್ಳು. ಜೆಡಿಎಸ್ ಪಕ್ಷದಲ್ಲಿರುವ ಗುಂಪುಗಾರಿಕೆಯನ್ನು ನಮ್ಮ ಪಕ್ಷದ ಮೇಲೆ ಹಾಕುತ್ತಿದ್ದಾರೆ. ಈ ಸರ್ಕಾರದ ಪೂರ್ಣಾವಧಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿತ್ತಾರೆ. ಅಭಿವೃದ್ಧಿ ಪರವಾದ ಒಳ್ಳೆಯ ಆಡಳಿತ ನೀಡುವ ಮೂಲಕ ಮುಂದಿನ ಬಾರಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರೇನ್ ಮಾರ್ಕೆಟ್​ಗೆ ಸಚಿವ ಪಾಟೀಲ ಭೇಟಿ
ಗದಗ:ಇತ್ತೀಚೆಗೆ ಬೆಂಕಿ ಅವಘಡ ಸಂಭವಿಸಿದ್ದ ಗ್ರೇನ್ ಮಾರ್ಕೆಟ್​ಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಭೇಟಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೆಂಕಿ ಅವಘಡದಲ್ಲಿ ಹಾನಿಗೊಳಗಾದವರಿಗೆ ಗರಿಷ್ಠ ಪರಿಹಾರ ನೀಡಲಾಗುವುದು. ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ ಒಟ್ಟು 1.20 ಕೋಟಿ ರೂ. ಹಾನಿಯಾಗಿದೆ ಎಂದು ಗೊತ್ತಾಗಿದೆ. ಆದರೆ, ಇಲ್ಲಿನ ವ್ಯಾಪಾರಸ್ಥರು ಇನ್ನೂ ಹೆಚ್ಚು ಹಾನಿಯಾಗಿದ್ದು ಸೂಕ್ತ ಪರಿಹಾರ ನಿಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಹಾನಿಗೊಳಗಾದ ವ್ಯಾಪಾರಸ್ಥರ ವಹಿವಾಟು ಆಧರಿಸಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮುಖಂಡ ಅನಿಲ ಮೆಣಸಿನಕಾಯಿ, ರಾಜು ಕುರಡಗಿ, ಅನಿಲ ಅಬ್ಬಿಗೇರಿ, ಎಂ.ಎಂ. ಹಿರೇಮಠ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಮತ್ತಿತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + nineteen =
Remember me
