ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿರುವುದಕ್ಕೆ ತುಂಬಾ ಬೇಸರವಾಗಿದೆ ಎನ್ನುವ ಮೂಲಕ ಶಾಸಕ ಬಿ.ಸಿ.ಪಾಟೀಲ್​ ಪರೋಕ್ಷವಾಗಿ ತಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನು ಸಾಬೀತು ಪಡಿಸಿದ್ದಾರೆ.
ಸಿಎಂ ಯಡಿಯೂರಪ್ಪ ವಿದೇಶದಿಂದ ಆಗಮಿಸಿದ ನಂತರ ಸಂಪುಟ ವಿಸ್ತರಣೆಗೆ ಸ್ಪಷ್ಟತೆ ನೀಡುತ್ತಾರೆ. ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್​ ಶೀಘ್ರ ನಿರ್ಧಾರ ಕೈಗೊಳ್ಳಬೇಕು. ಬೇರೆ ಪಕ್ಷಗಳಿಂದ ಬಂದ ಎಲ್ಲ 17 ಮಂದಿಗೂ ಅಧಿಕಾರ ಕೊಡುವುದಾಗಿ ಸಿಎಂ ಭರವಸೆ ನೀಡಿದ್ದರೂ, ಅದರಂತೆ ಅವರು ನಡೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ ಎಂದರು.
ಸಿಎಂ ಯಡಿಯೂರಪ್ಪ ಅವರ ಸಂಪುಟದಲ್ಲಿ ಕೇವಲ 17 ಮಂದಿ ಸಚಿವರು ಮಾತ್ರ ಕೆಲಸ ನಿರ್ವಹಿಸುತ್ತಾರೆ. ಇದರಿಂದ ಆಡಳಿತ ಚುರುಕುಗೊಂಡಿಲ್ಲ. ಹೀಗಾಗಿ ಕೂಡಲೇ ಸಂಪುಟ ವಿಸ್ತರಣೆ ಮಾಡಬೇಕು. ಶಾಸಕರು ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಚರ್ಚಿಸಲು ಸಾಧ್ಯವಿಲ್ಲ. ಸಿಎಂ ಯಡಿಯೂರಪ್ಪ ಅವರು ಚರ್ಚೆ ಮಾಡಿ ಸಂಪುಟ ವಿಸ್ತರಣೆ ಮಾಡುತ್ತಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಎಲ್ಲ ಮಾಹಿತಿ ಇದೆ. ಹೀಗಾಗಿ ಸಂಪುಟ ವಿಸ್ತರಣೆಗೆ ತೊಂದರೆಯಾಗುವುದಿಲ್ಲ ಅನ್ನುವ ವಿಶ್ವಾಸ ಇದೆ ಎಂದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್​ ಬಗ್ಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆ ಸರಿ ಇಲ್ಲ. ಅವರು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 13 =
Remember me
