ಬೆಂಗಳೂರು: ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ಪಶು ಸಂಗೋಪನಾ ಇಲಾಖೆಗೆ ಸೇರಿದ 86 ಎಕರೆ ಜಮೀನು ನೀಡಲು ಒಪ್ಪಿಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.
ತಿಪಟೂರು ತಾಲೂಕಿನ ಕೋನೆಹಳ್ಳಿ ಸಮೀಪದ ಬಿದರೆಗುಡಿ ಕಾವಲ್​ನ ಸರ್ವೆ ನಂಬರ್ 3ರಲ್ಲಿ ಇರುವ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯ ವ್ಯಾಪ್ತಿಗೆ ಸೇರಿದ ಜಮೀನನ್ನು ಸಾರ್ವಜನಿಕ ಉದ್ದೇಶಕ್ಕಾಗಿ ನೀಡಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆಯ ಕಾಲುವೆ 100 ಕಿ.ಮೀ.ನಿಂದ 102 ಕಿ.ಮೀ.ವರೆಗೆ 86 ಎಕರೆ ಜಮೀನು ನೀಡಲಾಗುತ್ತಿದೆ. ಇದಕ್ಕಾಗಿ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿವಿ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮಗಳ ನಡುವೆ ಒಡಂಬಡಿಕೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.
ಈ ಜಮೀನಿನಲ್ಲಿ ಪಶು ಸಂಗೋಪನಾ ಪಾಲಿಟೆಕ್ನಿಕ್ ಕಾಲೇಜು, ಜಾನುವಾರು ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಕೋನೆಹಳ್ಳಿ ವಿದ್ಯಾಲಯಗಳಿವೆ. ನೀರನ್ನು ಗುರುತ್ವಾಕರ್ಷಣೆಯ ಮೂಲಕ ತೆಗೆದುಕೊಂಡು ಹೋಗಲು ಪರ್ಯಾಯ ಮಾರ್ಗವಿಲ್ಲದ ಕಾರಣ ಜಮೀನು ನೀಡಲಾಗುತ್ತಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.
2018ರ ಜು.16ರಂದು ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸಭೆಯಲ್ಲಿಯೇ ಜಮೀನು ನೀಡಲು ನಿರ್ಧಾರ ಕೈಗೊಳ್ಳಲಾಗಿತ್ತು ಎಂದಿದ್ದಾರೆ.
ನಕ್ಸಲ್ ನಾಯಕಿ ಸೆರೆ: ಕೊಯಮತ್ತೂರಿನ ಆನೈಕಟ್ಟೆ ಬಳಿ ನಕ್ಸಲ್ ನಿಗ್ರಹಪಡೆ ಕಾರ್ಯಾಚರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
