ಬೆಂಗಳೂರು:ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಬಳಿಕ ಇದೀಗ ಮಹತ್ವದ ಖಾತೆಗಳಿಗಾಗಿ ಹಗ್ಗಜಗ್ಗಾಟ ನಡೆದಿದೆ. ಇದರಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ವರಿಷ್ಠರತ್ತ ಮುಖಮಾಡಿರುವುದರಿಂದ ನೂತನ ಮಂತ್ರಿಗಳ ಖಾತೆಗಳ ಹಂಚಿಕೆ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ ಪ್ರಕಾರ ಶುಕ್ರವಾರವೇ ಖಾತೆಗಳ ಹಂಚಿಕೆಯಾಗಬೇಕಾಗಿತ್ತು. ಆದರೆ ವರಿಷ್ಠರು ಗ್ರೀನ್ ಸಿಗ್ನಲ್ ನೀಡದ ಕಾರಣ ಖಾತೆಗಳ ಹಂಚಿಕೆ ತಡವಾಗುತ್ತಿದೆ ಎನ್ನಲಾಗುತ್ತಿದೆ. ಕೇಂದ್ರ ಸಚಿವ ಸಂಪುಟ ಪುನಾರಚನೆಯಾದ ದಿನವೇ ಸಂಜೆಯೊಳಗೆ ಖಾತೆಗಳು ಹಂಚಿಕೆಯಾದವು. ಬಿ.ಎಸ್.ಯಡಿಯೂರಪ್ಪ ಆಡಳಿತಾವಧಿಯಲ್ಲಿ ಸಚಿವ ಸಂಪುಟ ವಿಸ್ತರಣೆಯಾದ ಮರುದಿನವೇ ಖಾತೆಗಳು ಹಂಚಿಕೆಯಾಗಿದ್ದವು. ಆದರೆ ಈಗ ಮೂರು ದಿನವಾದರೂ ಹಂಚಿಕೆಯಾಗಿಲ್ಲ.
ಪಟ್ಟು ಹಿಡಿದ ಸಚಿವರು:ಬೊಮ್ಮಾಯಿ ಸಂಪುಟ ವಿಸ್ತರಣೆಯಾಗಿ ಮೂರು ದಿನಗಳು ಕಳೆದರೂ ಯಾವ ಸಚಿವರಿಗೆ ಯಾವ ಖಾತೆ ಎನ್ನುವುದು ಇತ್ಯರ್ಥವಾಗಿಲ್ಲ. ಸಚಿವರಿಗೆ ವಿಧಾನಸೌಧ, ವಿಕಾಸ ಸೌಧ ಕೊಠಡಿಗಳನ್ನು ಹಂಚಿದ ರೀತಿಯಲ್ಲಿ ಸರಾಗವಾಗಿ ಖಾತೆಗಳು ಹಂಚಿಕೆಯಾಗುವ ನಿರೀಕ್ಷೆಯಿತ್ತು. ಈ ನಡುವೆ ಹಲವು ಸಚಿವರು ನಿರ್ದಿಷ್ಟ ಖಾತೆಗೆ ಪಟ್ಟು ಹಿಡಿದಿದ್ದರೆ, ಸಿಎಂ ಕೊಡಲು ಮುಂದಾಗಿರುವ ಖಾತೆಗಳು ಕೆಲವರಿಗೆ ಇಷ್ಟವಿಲ್ಲವೆಂದು ಮೂಲಗಳು ತಿಳಿಸಿವೆ.
ಪಟ್ಟಿ ಬದಲಾವಣೆ?:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ರಾತ್ರಿ ಖಾತೆಗಳ ಯಾದಿ ಸಿದ್ಧಪಡಿಸಿ ಅದನ್ನು ವರಿಷ್ಠರಿಗೆ ಕಳುಹಿಸಿದ್ದಾರೆ. ಅದರಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಗಳಿರುವುದು ತಡವಾಗಲು ಕಾರಣವಾಗಿದೆ.
ರಾಜ್ಯದಲ್ಲಿ ಮತ್ತೊಬ್ಬ ತಹಸೀಲ್ದಾರ್​ರಿಂದ ಕೋವಿಡ್​ ನಿಯಮ ಉಲ್ಲಂಘನೆ; ಕಾನೂನಿಗೂ ಮೀರಿ ಅದ್ಧೂರಿ ಕಾರ್ಯಕ್ರಮ

ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷೆ; ಶಾಸಕರ ಬೆಂಬಲಿಗರ ಕಿರುಕುಳ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
