ಬೆಂಗಳೂರು:ಕೆಪಿಎಸ್​ಸಿ 2011ರ ಗೆಜೆಟೆಡ್ ಪೊ›ಬೇಷನರಿ ಹುದ್ದೆಗಳ ಆಯ್ಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತ ವಿಚಾರಣೆಗೆ ಅನುಮತಿ ಕೊಡುವ ಬಗ್ಗೆ ತೀರ್ವನಕ್ಕೆ ಸಂಪುಟ ಉಪ ಸಮಿತಿ ರಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
‘ಕೆಪಿಎಸ್​ಸಿ ಮಾಜಿ ಅಧ್ಯಕ್ಷ ಮತ್ತು 9 ಮಾಜಿ ಸದಸ್ಯರ ವಿರುದ್ಧ ವಿಚಾರಣೆಗೆ ಅನುಮತಿ ಕೊಡುವ ವಿಚಾರದಲ್ಲಿ ಸಾಕಷ್ಟು ಕಾನೂನು ತೊಡಕುಗಳಿವೆ. ಈ ಬಗ್ಗೆ ವಿಚಾರಣೆಗೆ ಒಳಪಡಿಸಬೇಕೆ? ಬೇಡವೆ? ಎನ್ನುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ವರದಿ ಪಡೆಯಲು ನನ್ನ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗುತ್ತಿದೆ. ಸಮಿತಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಇರಲಿದ್ದಾರೆ’ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಇದನ್ನೂ ಓದಿ:ಕೊಲ್ಕತ್ತದ ಕೆಲವು ಪುರುಷರ ವಿಚಿತ್ರ ಖಯಾಲಿ; ಮಾಜಿ ಪ್ರೇಯಸಿಯರಿಂದ ಪೊಲೀಸರಿಗೆ ದೂರು
ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಅಡ್ವೋಕೇಟ್ ಜನರಲ್ ದೂರು ಆಧರಿಸಿ ಸಿಐಡಿ ಪ್ರಕರಣ ದಾಖಲು ಮಾಡಿತ್ತು. ಕೆಪಿಎಸ್​ಸಿ ಸದಸ್ಯರ ವಿರುದ್ಧವಾಗಿ ವಿಚಾರಣೆ ಮಾಡಬೇಕೆ? ಬೇಡವೆ? ಎಂಬ ಚರ್ಚೆ ನಮ್ಮ ಮುಂದಿತ್ತು. ವಿಚಾರಣೆ ನಡೆಸಲು ರಾಷ್ಟ್ರಪತಿಗಳ ಅನುಮತಿ ಬೇಕಾಗುತ್ತದೆ. ಆದರೆ, ಹಿಂದಿನ ಸರ್ಕಾರ ಆಕಸ್ಮಿಕವಾಗಿ ವಿಚಾರಣೆಗೆ ರಾಜ್ಯಪಾಲರ ಅನುಮತಿ ಕೇಳಿತ್ತು. ಇದು ಕಾನೂನು ಸಮ್ಮತ ಅಲ್ಲ ಎಂದು ಕಡತ ಹಾಗೇ ಇತ್ತು. ಈ ಮಧ್ಯೆ ವಿಧಾನ ಮಂಡಲದ ಅಧಿವೇಶನದಲ್ಲಿ ಎಲ್ಲ ಸದಸ್ಯರು ಈ ಪ್ರಕರಣದಲ್ಲಿ ಗುರುತರ ಆರೋಪ ಯಾವುದೂ ಇಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ತೊಂದರೆ ಮಾಡಬೇಡಿ ಎಂಬ ಬೇಡಿಕೆ ಇಟ್ಟಿದ್ದರು. ಹಾಗಾಗಿ ಏಕಾಏಕಿ ತೀರ್ಮಾನ ಕೈಗೊಳ್ಳಲು ಸಾಧ್ಯವಾಗದ್ದರಿಂದ ಉಪ ಸಮಿತಿ ರಚಿಸಲು ತೀರ್ವನಿಸಲಾಗಿದೆ. ಪ್ರಕರಣವನ್ನು ವಿಸ್ಕೃತವಾಗಿ ಸಮಿತಿ ಅಧ್ಯಯನ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ಆ ಬಳಿಕ ಸಂಪುಟ ಈ ಬಗ್ಗೆ ಸ್ಪಷ್ಟ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.ಇದನ್ನೂ ಓದಿ:ಹಿಂದಿ ಹೇರಿಕೆ ವಿರುದ್ಧ ದರ್ಶನ್​ ಖಡಕ್​ ಪೋಸ್ಟ್​; ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ್​ ಆಚರಣೆ ಬೇಡವೆಂದ ದಚ್ಚು
ಬಿಬಿಎಂಪಿ ಕೌನ್ಸಿಲರ್‌ಗಳಿಗೆ ಅಧಿಕಾರಿಗಳಿಂದ ತಲಾ 90000 ರೂ.ನ ಐಫೋನ್ ಗಿಫ್ಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 3 =
Remember me
