ಬೆಂಗಳೂರು:ವಾಲ್ಮೀಕಿ ನಿಗಮದ ಹಣ ಬಳಸಿಕೊಂಡು ಸಂಸದರಾಗಿ ಆಯ್ಕೆಯಾದ ಈ.ತುಕಾರಾಂ ಅವರನ್ನು ಸಂಸದರ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಚುನಾವಣಾ ಆಯೋಗದ ಮುಂದೆ ಮನವಿ ಸಲ್ಲಿಸಲಿದ್ದೇವೆ. ಅಕ್ರಮ ಹಣದಿಂದ ಆಯ್ಕೆಯಾದ ಈ ಸಂಸದರಿಗೆ ಸಂಸತ್ತಿನ ಒಳಗೆ ಸಂವಿಧಾನದ ಪ್ರತಿಯನ್ನು ಹಿಡಿದು ಪ್ರಮಾಣವಚನ ಸ್ವೀಕರಿಸಲು ಯಾವುದೇ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಈ.ತುಕಾರಾಂ ಅವರು ಸಂಸತ್ತಿನ ಒಳಗಡೆ ಒಂದು ಕ್ಷಣ ಕುಳಿತುಕೊಳ್ಳಲೂ ನೈತಿಕ ಮೌಲ್ಯವನ್ನು ಕಳಕೊಂಡಿದ್ದಾರೆ. ಅವರಿಗೆ ಆ ಅರ್ಹತೆ ಇಲ್ಲ ಎಂದು ಮಾಧ್ಯಮಗಳ ಮೂಲಕ ಜನತೆಯ ಗಮನಕ್ಕೆ ತರುವುದಾಗಿ ಸ್ಪಷ್ಟಪಡಿಸಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ನಾಗೇಂದ್ರರನ್ನು ಬಂಧಿಸಿದ ಇ.ಡಿ.ಯು ನ್ಯಾಯಾಂಗದ ಮುಂದೆ ಹಾಜರುಪಡಿಸುವ ರಿಮಾಂಡ್ ಅರ್ಜಿಯಲ್ಲಿ ಇವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ; ಪರಿಶಿಷ್ಟ ವರ್ಗದ ಅಭಿವೃದ್ಧಿಗೆ ಮೀಸಲಿದ್ದ ಹಣ ದುರ್ಬಳಕೆ ಆಗಿದೆ. ಚುನಾವಣೆಗೆ ಕೂಡ 20 ಕೋಟಿ 19 ಲಕ್ಷ ರೂಪಾಯಿ ದುರ್ಬಳಕೆ ಆಗಿದೆ ಎಂದು ರಿಮಾಂಡ್ ಅರ್ಜಿಯಲ್ಲಿ ತಿಳಿಸಿದ್ದಾರೆ ಎಂದು ವಿವರ ನೀಡಿದರು.
ಹಣ ಬಳಕೆ ಹಿಂದೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಕುಮ್ಮಕ್ಕು..?
ಲೋಕಸಭಾ ಚುನಾವಣೆಗೆ ಎಸ್‍ಟಿ ನಿಗಮದ ಹಣವನ್ನು ನಾಗೇಂದ್ರ ಅವರು ಬಳಸಿದ್ದಾರೆ ಎಂದರೆ ಇದಕ್ಕೆ ಏನು ಕಾರಣ? ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ತುಕಾರಾಂ, ನಾಗೇಂದ್ರರ ಸಂಬಂಧಿಕರೂ ಅಲ್ಲ. ನಾಗೇಂದ್ರರ ಸಹೋದರರು, ಮನೆಯವರು, ಮಕ್ಕಳು ಚುನಾವಣೆಗೆ ಸ್ಪರ್ಧಿಸಿರಲಿಲ್ಲ.
ಆದರೂ ಸಹ ನಾಗೇಂದ್ರ ಅವರು 20.19 ಕೋಟಿ ರೂಪಾಯಿಯನ್ನು ಲೋಕಸಭಾ ಚುನಾವಣೆಗೆ ದುರ್ಬಳಕೆ ಮಾಡಿದ ದಾಖಲೆ ಸಿಕ್ಕಿದೆ ಎಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯನವರ ಒಪ್ಪಿಗೆ ಮತ್ತು ಕುಮ್ಮಕ್ಕು ಇಲ್ಲದೆ, ಈ ಹಣವನ್ನು ಚುನಾವಣೆಗೆ ಬಳಸಲು ಸಾಧ್ಯವೇ ಎಂದು  ಪ್ರಶ್ನಿಸಿದರು.
ಹಾಗಾಗಿ ಚುನಾವಣಾ ಅಕ್ರಮದ ಕುರಿತು ಇನ್ನಷ್ಟು ಆಳವಾದ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. ಬಡವರ ಹಣವನ್ನು ಚುನಾವಣೆಗೆ ಬಳಸಿಕೊಂಡು ಯಾರು ಸಂಸದರಾಗಿ ಆಯ್ಕೆಯಾಗಿದ್ದಾರೋ (ಇ.ತುಕಾರಾಂ) ಅವರ ಆಯ್ಕೆಯನ್ನು ರದ್ದುಪಡಿಸಲು ಪಿ.ರಾಜೀವ್ ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 6 =
Remember me
