ಕೊಡಗು:ಗಾಂಜಾ ಗಿಡಗಳನ್ನು ಬೆಳೆಯುವಂತಿಲ್ಲ, ಗಾಂಜಾ ಸೊಪ್ಪು ಮಾರಾಟ ಮಾಡುವಂತಿಲ್ಲ ಎಂಬ ಕಾನೂನು ನಮ್ಮ ದೇಶದಲ್ಲಿದೆ. ಆದರೂ ಹಲವೆಡೆ ಅಕ್ರಮ ದಾರಿಯಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇಲ್ಲೊಬ್ಬ ಖತರ್ನಾಕ್​ ವಂಚಕ ಯಾರಿಗೂ ಅನುಮಾನ ಬಾರದಿರಲೆಂದು ಮನೆಯ ಹಿತ್ತಲಲ್ಲಿ ಹೂವಿನ ಕುಂಡದಲ್ಲೇ ಗಾಂಜಾ ಸಸಿಗಳನ್ನು ಬೆಳೆದು ಸಿಕ್ಕಿಬಿದ್ದಿದ್ದಾನೆ.
ಮೂರ್ನಾಲ್ಕು ದಿನದ ಹಿಂದಷ್ಟೇ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ಬರೋಬ್ಬರಿ ನಾಲ್ಕೂವರೆ ಎಕರೆ ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆಯಾಗಿತ್ತು. ಗ್ರಾಮದ ಸಹೋದರ ರೈತರಿಗೆ ಸೇರಿದ ಜಮೀನನ್ನು ಗುತ್ತಿಗೆ ಪಡೆದಿದ್ದ ಬಳ್ಳಾರಿ ಜಿಲ್ಲೆ ಸಂಡೂರಿನ ದುಷ್ಕರ್ಮಿಯೊಬ್ಬ ರಾಜಾರೋಷವಾಗಿ ಗಾಂಜಾ ಬೆಳೆದು ಸಿಕ್ಕಿಬಿದ್ದಿದ್ದ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲೂ ವ್ಯಕ್ತಿಯೊಬ್ಬ ಕಬ್ಬಿನ ಗದ್ದೆಯಲ್ಲೇ ಗಾಂಜಾ ಬೆಳೆದು ಪೊಲೀಸರ ಕೈಗೆ ಮೊನ್ನೆಯಷ್ಟೇ ಸಿಕ್ಕಿಬಿದ್ದಿದ್ದ. ಇದೀಗ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಿಲುವಾಗಿಲು ಗ್ರಾಮದ ವೃದ್ಧನೊಬ್ಬ ಮನೆಯ ಹಿಂದೆ ಹೂ ಕುಂಡದಲ್ಲಿ ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ.
ಇದನ್ನೂ ಓದಿರಿಕಬ್ಬಿನ ಗದ್ದೆಯಲ್ಲಿ ಗಾಂಜಾ ಗಿಡಗಳು!
ಸೋಮವಾರಪೇಟೆ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ 60 ವರ್ಷದ ಶಾಂತರಾಜು ಎಂಬಾತ ತನ್ನ ಮನೆ ಆವರಣದಲ್ಲಿ ಹೂವಿನ ಕುಂಡದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶನಿವಾರ ಸಂತೆ ಠಾಣೆಯ ಪೊಲೀಸರು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದರು. ಸುಮಾರು 1 ಕೆಜಿ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದು, ಆರೋಪಿ ಶಾಂತರಾಜುನನ್ನು ಬಂಧಿಸಿದ್ದಾರೆ.
ಡ್ರಗ್ಸ್​ ಮಾಫಿಯಾವನ್ನು ಮಟ್ಟಹಾಕಲು ರಾಜ್ಯಾದ್ಯಂತ ಭರ್ಜರಿ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು ಈಗಾಗಲೇ ಹಲವರನ್ನು ಬಂಧಿಸಿದ್ದಾರೆ. ನಿತ್ಯ ಮೂರ್ನಾಲ್ಕು ಕಡೆ ಗಾಂಜಾ ಸಮೇತ ಡ್ರಗ್ಸ್ ಪೆಡ್ಲರ್​ಗಳು ಪೊಲೀಸರ ಬಲೆಗೆ ಬೀಳುತ್ತಲೇ ಇದ್ದಾರೆ.
ರೈತನ ಜಮೀನು ಪಡೆದು ಬರೋಬ್ಬರಿ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದ ದುಷ್ಕರ್ಮಿ

https://www.vijayavani.net/actress-sanjana-galrani-arrested-rahul-birthday-party-video-viral/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
