ಚಿತ್ರದುರ್ಗ:ಡ್ರಗ್ಸ್​ ಮಾಫಿಯಾ ಭಾರೀ ಸದ್ದು ಮಾಡುತ್ತಿದ್ದು, ರಾಜ್ಯಾದ್ಯಂತ ಸಿಸಿಬಿ ಮತ್ತು ಪೊಲೀಸ್​ ಇಲಾಖೆ ಕಟ್ಟೆಚ್ಚರ ವಹಿಸಿದೆ. ದಂಧೆಯನ್ನು ಬೇರುಸಮೇತ ಕಿತ್ತುಹಾಕಲು ಸಜ್ಜಾಗಿರುವ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಒಂದೇ ಗ್ರಾಮದಲ್ಲಿ ಬರೋಬ್ಬರಿ ನಾಲ್ಕೂವರೆ ಎಕರೆ ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ.
ಮೊಳಕಾಲ್ಮೂರು ತಾಲೂಕಿನ ವಡೇರಹಳ್ಳಿ ಗ್ರಾಮದ ಸಹೋದರ ರೈತರಿಗೆ ಸೇರಿದ ನಾಲ್ಕೂವರೆ ಎಕರೆ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗಿದೆ. ಖಚಿತ ಮಾಹಿತಿ ಆಧರಿಸಿ ರಾಂಪುರ ಠಾಣೆಯ ಪಿಎಸ್ಐ ಗುಡ್ಡಪ್ಪ ನೇತೃತ್ವದ ತಂಡವು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದಾಗ ಕೋಟ್ಯಂತರ ಮೌಲ್ಯದ ಗಾಂಜಾ ಬೆಳೆ ಪತ್ತೆಯಾಗಿದೆ.ಇದನ್ನೂ ಓದಿರಿಗಾಂಜಾ ಬೆಳೆಯಲು ಪಶ್ಚಿಮಘಟ್ಟ ಕಾಡುಗಳೇ ಫೇವರಿಟ್
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂತಾಪುರ ಗ್ರಾಮದ ವ್ಯಕ್ತಿಯೊಬ್ಬ ಮೊಳಕಾಲ್ಮೂರು ತಾಲೂಕಿನ ವಡೇರಹಳ್ಳಿಯಲ್ಲಿ ಜಮೀನನ್ನು ಗುತ್ತಿಗೆ ಪಡೆದು ಕದ್ದುಮುಚ್ಚಿ ಗಾಂಜಾಬೆಳೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪೊಲೀಸರು ಜಮೀನು ಮಾಲೀಕರು ಹಾಗೂ ಗಾಂಜಾ ಸೊಪ್ಪು ಮಾರಾಟದ ಬ್ರೋಕರ್​ನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ರಾಜ್ಯದ ವಿವಿಧೆಡೆ ಗಾಂಜಾ ಪೆಡ್ಲರ್​ಗಳು, ಗಾಂಜಾ ಬೆಳೆಗಾರರು ಪೊಲೀಸರ ಬಲೆಗೆ ಬೀಳುತ್ತಿರುವ ಸುದ್ದಿ ನಿತ್ಯ ಮೂರ್ನಾಲ್ಕು ಬರುತ್ತಲೇ ಇವೆ. ಇದೀಗ ರೈತರೊಬ್ಬರ ಜಮೀನನ್ನು ಗುತ್ತಿಗೆ ಪಡೆದು ಗಾಂಜಾ ಬೆಳೆದಿರುವ ಪ್ರಕರಣ ರಾಜ್ಯದ ಜನತೆಯನ್ನೇ ಬೆಚ್ಚಿಬೀಳಿಸಿದೆ. ಬಗೆದಷ್ಟು ಆಳ ಎಂಬಂತಿದೆ ಈ ಡ್ರಗ್ಸ್​ ಜಾಲ.
ಡ್ರಗ್ಸ್​ ಜಾಲದ ಕಿಂಗ್​ಪಿನ್​ ಅನಿಕಾ ಬಾಯ್ಬಿಟ್ಲು ಸ್ಫೋಟಕ ರಹಸ್ಯ, ಕನ್ನಡ ನಟ-ನಟಿಯರೇ ಗಿರಾಕಿಗಳು!

ಕ್ರೈ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
