ರಾಮನಗರ:ಗಾಂಜಾ ವ್ಯಾಪರಿಗಳ ವಿರುದ್ಧ ರಾಮನಗರ ಜಿಲ್ಲೆಯ ಪೊಲೀಸ್ ಸಹ ಕಾರ್ಯಾಚರಣೆಗೆ ಇಳಿದಿದೆ. ಅದರಲ್ಲು ರಾಮನಗರ ಸುತ್ತ ಮುತ್ತ ನಡೆಯುತ್ತಿದ್ದ ಗಾಂಜಾ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬುಧವಾರ ಸಂಜೆ ಕಾರ್ಯಾಚರಣೆ ನಡೆಸಿರೋ ಟೌನ್ ಪೊಲೀಸರು ಒಬ್ಬ ಆರೋಪಿಯನ್ನ ಬಂಧಿಸಿ 21 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ರಾಮನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಹಾಜಿ ನಗರಕ್ಕೆ ಹೋಗುವ ದಾರಿಯಲ್ಲಿ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಜನನ ಹಿನ್ನೆಲೆಯಲ್ಲಿ ದಾಳಿ ಮಾಡಿದ ಪೊಲೀಸರು ಆರೋಪಿಯನ್ನ ಬಂಧಿಸಿ, ಆತನ ಬಳಿಯಿದ್ದ ೨೧ ಕೆಜಿ ಗಾಂಜಾ ವಶ ಪಡಿಸಿಕೊಂಡಿದ್ದಾರೆ.
ಜಾಲ ಬೇದಿಸುವ ಸಲುವಾಗಿ ವಿಚಾರಣೆಯನ್ನು ಮುಂದುವರಿಸಿದ್ದು, ಆರೋಪಿ‌ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕಾರ್ಯಾಚರಣೆಯಲ್ಲಿ ಟೌನ್ ಸರ್ಕಲ್ ಇನ್ಸ್‌ಪೆಕ್ಟರ್ ನರಸಿಂಹಮೂರ್ತಿ, ಪಿಎಸ್ ಐಗಳಾದ ಹೇಮಂತ್, ಶುಭಾಂಬಿಕ ಮುಂತಾದವರು ಇದ್ದರು.
ಕರೊನಾದಿಂದ ಬಳಲುತ್ತಿರುವ ಬಿಜೆಪಿ ಸಂಸದ ಅಶೋಕ​ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 10 =
Remember me
