ಬೆಂಗಳೂರು:ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದ ವಿದೇಶಿ ಹೂಡಿಕೆಯನ್ನು ಆಕರ್ಷಿಸಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಮೊದಲ ದಿನ ಆರ್.ಟಿ.ಎಕ್ಸೃ್ ಏರೋಸ್ಪೇಸ್ ಕಂಪನಿ, ಇಂಟೆಲ್ ಸ್ಯಾಟ್ ಮತ್ತು ಅಮೆರಿಕ-ಭಾರತ ಎಸ್‌ಎಂಇ ಕೌನ್ಸಿಲ್ ಜತೆ ಮಹತ್ವದ ಮಾತುಕತೆಗಳನ್ನು ನಡೆಸಿದ್ದಾರೆ.
ಅಮೆರಿಕದ ಕಂಪನಿಗಳಿಗೆ ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜಧಾನಿಯ ಆಚೆಗೂ ಹೂಡಿಕೆಗೆ ಇರಲು ಉಜ್ವಲ ಅವಕಾಶಗಳು ಮತ್ತು ಅದಕ್ಕೆ ರಾಜ್ಯ ಸರಕಾರವು ನೀಡುತ್ತಿರುವ ಪ್ರೋತ್ಸಾಹಗಳ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಎಂ.ಬಿ.ಪಾಟೀಲ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಹೊಂದಿರುವ ಆರ್.ಟಿ.ಎಕ್ಸ್ ರಾಜ್ಯದಲ್ಲಿ ಪೂರೈಕೆ ಸರಪಳಿ ಮತ್ತು ವಿದ್ಯುನ್ಮಾನ ಸಾಧನಗಳ ಉತ್ಪಾದನೆಯತ್ತ ಆಸಕ್ತಿ ತೋರಿಸಿದ್ದು, ಈ ಬಗ್ಗೆ ಅದರ ಉನ್ನತ ಮಟ್ಟದ ಪ್ರತಿನಿಧಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಗಿದೆ. ಇದರ ಜತೆಗೆ ಬಾಹ್ಯಾಕಾಶ ನವೋದ್ಯಮಗಳ ಕ್ಷೇತ್ರದಲ್ಲಿ ಸಹಭಾಗಿತ್ವ ಹೊಂದುವ ಕುರಿತು ಚರ್ಚಿಸಲಾಗಿದೆ.
ಇಂಟೆಲ್ ಸ್ಯಾಟ್ ಕಂಪನಿಯೊಂದಿಗೆ ಭಾರತೀಯ ಬಾಹ್ಯಾಕಾಶ ನವೋದ್ಯಮಗಳ ಮೂಲಕ ‘ಸ್ಯಾಟಲೈಟ್ ಸೋರ್ಸಿಂಗ್ ಕುರಿತು ಮತ್ತಷ್ಟು ವಿಸ್ತೃತ ಸ್ವರೂಪದಲ್ಲಿ ಕಾರ್ಯ ಚಟುವಟಿಕೆ ವಿಸ್ತರಣೆ, ಬಾಹ್ಯಾಕಾಶ ಸಂವಹನದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಶೀನ್ ಲರ್ನಿಂಗ್ ಗಳಿಗೆ ಇರುವ ಪಾತ್ರಗಳು ಮತ್ತು ಸ್‌ಟಾ ವೇರ್ ಆಧಾರಿತ ಪರಿಹಾರಗಳನ್ನು ಕುರಿತು ಸಹಭಾಗಿತ್ವವನ್ನು ಬೆಳೆಸಿಕೊಳ್ಳಬೇಕಾದ ಅಗತ್ಯವನ್ನು ಮಾತುಕತೆಯ ಸಂದರ್ಭದಲ್ಲಿ ಮನಗಾಣಲಾಯಿತು ಎಂದು ಎಂ.ಬಿ.ಪಾಟೀಲ್ ವಿವರಿಸಿದ್ದಾರೆ.
ರಾಜ್ಯ ಸರಕಾರ ಮತ್ತು ಶಿಕ್ಷಣ ಸಂಸ್ಥೆಗಳೊಂದಿಗೆ ಪ್ರತಿಭೆಗಳನ್ನು ಉತ್ತೇಜಿಸುವಂತಹ ವ್ಯವಸ್ಥೆಯನ್ನು ಪಾಲುದಾರಿಕೆಯಲ್ಲಿ ಅಭಿವೃದ್ಧಿ ಪಡಿಸುವ ಕುರಿತು ಮಾತುಕತೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೆ, ದೀರ್ಘಾವಧಿ ಯೋಜನೆಯ ಭಾಗವಾಗಿ ರಾಜ್ಯದಲ್ಲಿ ಗ್ಲೋಬಲ್ ಕೇಪಬಿಲಿಟಿ ಸೆಂಟರ್ ಸ್ಥಾಪಿಸುವ ಕುರಿತು ಚರ್ಚಿಸಲಾಗಿದೆ.
ಯುಎಸ್-ಇಂಡಿಯಾ ಎಸ್‌ಎಂಇ ಕೌನ್ಸಿಲ್ ನ 30ಕ್ಕೂ ಹೆಚ್ಚಿ ಸಿಇಒಗಳನ್ನು ಭೇಟಿಯಾಗಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ಹೇರಳ ಅವಕಾಶಗಳನ್ನು ಮತ್ತು ಸರಕಾರವು ಉದ್ಯಮಗಳ ಬೆಳವಣಿಗೆಗೆ ರೂಪಿಸಿರುವ ಉಪಕ್ರಮಗಳನ್ನು ಗಮನಕ್ಕೆ ತರಲಾಗಿದೆ.
ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಸಚಿವರ ಆಪ್ತ ಕಾರ್ಯದರ್ಶಿ ನರೇಂದ್ರ ಇದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
