ಮೈಸೂರು:ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ಉತ್ಸವದ ಅಂಗವಾಗಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಬುಧವಾರ ಗಜಯಣಕ್ಕೆ ಚಾಲನೆ ನೀಡಲಾಯಿತು.
ಕ್ಯಾಪ್ಟನ್​ ಅಭಿಮನ್ಯು ನೇತೃತ್ವದಲ್ಲಿ ಕಂಜನ್, ಏಕಲವ್ಯ, ಭೀಮ, ಲಕ್ಷ್ಮೀ, ವರಲಕ್ಷ್ಮೀ, ರೋಹಿತ್ , ಧನಂಜಯ, ಗೋಪಿ ಆನೆಗಳು ಅರಮನೆ ನಗರಿ ಮೈಸೂರಿನತ್ತ ಪಯಣ ಬೆಳೆಸಿದವು. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಗಜಪಯಣಕ್ಕೆ ಬೆಳಗ್ಗೆ 10.40ಕ್ಕೆ ಚಾಲನೆ ನೀಡಿದರು. ಅರ್ಚಕ ಪ್ರಹ್ಲಾದ್ ಪೂಜಾ ವಿಧಿವಿಧಾನ ನೆರವೇರಿಸಿದರು.
ವೀರನಹೊಸಳ್ಳಿಯಿಂದ ಹೊರಡುವ ಗಜಪಡೆ ಸಂಜೆ ಲಾರಿಯ ಮೂಲಕ ಮೈಸೂರು ನಗರವನ್ನು ಪ್ರವೇಶಿಸಲಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿವೆ. ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅಗತ್ಯವಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ:VIDEO| ಚೇಸ್​ ಮಾಡಿಕೊಂಡು ಬಂದು ಕಾರು ಅಡ್ಡಗಟ್ಟಿ ಗೂಂಡಾವರ್ತನೆ; ಆರೋಪಿ ಅರೆಸ್ಟ್​
ದಸರಾ ಗಜಪಡೆ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಅರಣ್ಯ ಇಲಾಖೆ ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ವಿಮೆ ಮಾಡಿಸಿದೆ. ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ.
ಆಗಸ್ಟ್​ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:5 + fifteen =
Remember me
