ಶಿವಮೊಗ್ಗ:ಸ್ನೇಹಿತನ ಜನ್ಮದಿನ ಆಚರಿಸಲು ಗೋವಾಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕರಿಬ್ಬರು ಭದ್ರಾವತಿ ತಾಲೂಕಿನ ಸಿದ್ಧಾಪುರ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.ಬೆಂಗಳೂರು ವಿಜಯನಗರದ ರಾಜೇಶ್(19), ತರುಣ್(19) ಸ್ಥಳದಲ್ಲೇ ಮೃತಪಟ್ಟರೆ, ಪುನೀತ್ (18), ನವೀನ್(20), ಚಂದ್ರ(20), ಪ್ರೇರಣ್ (19) ಹಾಗೂ ಲಿಖಿತ್(18) ಗಾಯಗೊಂಡಿದ್ದಾರೆ.ಸ್ನೇಹಿತನ ಜನ್ಮದಿನದ ಸಂಭ್ರಮವನ್ನು ಆಚರಿಸಲು ಕಳೆದ ಮಂಗಳವಾರ ಗೋವಾಕ್ಕೆ ತೆರಳಿದ್ದರು. ಬರ್ತಡೇ ಬಳಿಕ ಎರಡು ದಿನ ಗೋವಾ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು.ಈ ವೇಳೆ ಭದ್ರಾವತಿ ತಾಲೂಕಿನ ಸಿದ್ದಾಪುರ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಅಪ್ಪಳಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಭದ್ರಾವತಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 7 =
Remember me
