ತುಮಕೂರು:ದೇವರ ದರ್ಶನ ಪಡೆದು ಮರಳುತ್ತಿದ್ದವರ ಕಾರು ಪಲ್ಟಿಯಾಗಿ ಎರಡೂವರೆ ತಿಂಗಳ ಮಗು ಸಾವಿಗೀಡಾಗಿದ್ದು, ಸಣ್ಣಪುಟ್ಟ ಗಾಯಕ್ಕೊಳಗಾಗಿರುವ ತಂದೆ-ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಸಮರ್ಥ ಸಾವಿಗೀಡಾದ ಮಗು. ಪರಮೇಶ್-ರಮ್ಯಾ ಗಾಯಗೊಂಡಿರುವ ತಂದೆ-ತಾಯಿ. ತುಮಕೂರು ಜಿಲ್ಲೆಯ ಕುಣಿಗಲ್​ನ ರಾಷ್ಟ್ರೀಯ ಹೆದ್ದಾರಿ-75ರ ನಾಗೇಗೌಡನ ಪಾಳ್ಯ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.
ಮಾಗಡಿ ತಾಲೂಕಿನ ಕುದೂರು ಹೋಬಳಿಯ ನಾರಸಂದ್ರ ಗ್ರಾಮದ ಪರಮೇಶ್ ಹಾಗೂ ರಮ್ಯ ಇಂದು ಬೆಳಗ್ಗೆ ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ದರ್ಶನ ಮುಗಿಸಿ ಕಾರಿನಲ್ಲಿ ವಾಪಸ್ ಬರುತ್ತಿದ್ದರು. ಈ ವೇಳೆ ಚಾಲನಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಸ್ಥಳಕ್ಕೆ ಅಮೃತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೋಟಕ್ಕೆ ಕೆಲಸಕ್ಕೆಂದು ಹೋಗಿದ್ದ ರೈತ, ಕಾಲು ಜಾರಿ ಬಾವಿಗೇ ಬಿದ್ದು ಸಾವು!
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:2 + 10 =
Remember me
