ಚಿತ್ರದುರ್ಗ:ಕಾರಿನ ಟೈರ್​ ಸ್ಫೋಟಗೊಂಡು ಡಿವೈಡರ್​ ಮೇಲೆ ಹಾರಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಹಾಗೂ ಆಸ್ಪತ್ರೆಯಲ್ಲಿ ಓರ್ವ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭೀಕರ ಅಪಘಾತವು ಹಿರಿಯೂರು ತಾಲೂಕಿನ ಆನೆಸಿದ್ರಿ ಕ್ರಾಸ್ ಬಳಿಯಿರುವ ಶನೇಶ್ವರ ದೇವಸ್ಥಾನ ಮುಂಭಾಗದ ರಾ.ಹೆ 48ರಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟವರನ್ನು ಬಸವರಾಜ್(40), ಪತ್ನಿ ಸರೋಜಮ್ಮ (35) ಹಾಗೂ ಚಾಲಕ ಕಲ್ಲವೀರಪ್ಪ ದೊಡ್ಡಮನಿ (44) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಮಗ ತಾಯಿಯನ್ನೇ ಮದುವೆಯಾದನಾ?: ವೈರಲ್​ ಸ್ಟೋರಿ ಹಿಂದಿನ ಅಸಲಿಯತ್ತೇ ಬೇರೆ ಇದೆ!
CKK 7007 ನಂಬರಿನ ಮಾರುತಿ 800 ಕಾರು ಹಾವೇರಿಯಿಂದ ಬೆಂಗಳೂರಿಗೆ ತೆರೆಳುತಿತ್ತು. ಈ ವೇಳೆ ಕಾರಿನ ಟೈರ್​ ಸ್ಪೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್​ ಮೇಲೆ ಹಾರಿ ಬಿದ್ದಿದೆ. ಮೃತ ಕಲ್ಲವೀರಪ್ಪ ಅವರ ಒಬ್ಬ ಹಾಗೂ ಬಸವರಾಜ್ ಅವರ ಮೂವರು ಮಕ್ಕಳಿಗೆ ಗಂಭೀರ ಗಾಯವಾಗಿದೆ.

ಗಾಯಗೊಂಡಿರುವ ಮಕ್ಕಳಾದ ಜಯಂತ್, ವಿಸ್ಮಯ್, ಶೀತಲ್ ಹಾಗೂ ಸಮೀಕ್ಷಾರನ್ನು ತಾಲ್ಲೂಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಆಸ್ಪತ್ರೆಗೆ ಭೇಟಿ ನೀಡಿದ ಡಿವೈಎಸ್ಪಿ ರೋಷನ್ ಜಮೀರ್, ಸಿಪಿಐ ರಾಘವೇಂದ್ರ ಹಾಗೂ ಪಿಎಸ್ಐ ಪರಮೇಶ್ ಪರಿಶೀಲಿಸಿದರು. ಘಟನೆ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ತಂದೆಯ ಲ್ಯಾಪ್​ಟಾಪ್​ನಲ್ಲಿ ತನ್ನ ಬೆತ್ತಲೆ ಫೋಟೋಗಳನ್ನು ನೋಡಿ ಬೆಚ್ಚಿ ಬಿದ್ದಳು ಮಗಳು!
https://www.vijayavani.net/girl-16-is-gang-raped-by-30-men-in-an-israel-hotel/
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − 3 =
Remember me
