ಬೆಂಗಳೂರು:ಚಿತ್ರನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವಿಗೀಡಾಗಿದ್ದು, ಆಕೆಯ ಪತಿ ಗಾಯಗೊಂಡಿದ್ದಾರೆ. ರಾತ್ರಿಯಲ್ಲಿ ಈ ಅಪಘಾತವಾಗಿದ್ದರಿಂದ ನಟ ನಾಗಭೂಷಣ್ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರಾ ಎಂಬ ಪ್ರಶ್ನೆಯೊಂದೂ ಮೂಡಿದೆ.
ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ 9.30ರ ಸುಮಾರಿಗೆ ಅಪಘಾತವಾಗಿತ್ತು. ಪಾದಚಾರಿಗಳಾದ ಕೃಷ್ಣ ಮತ್ತು ಪ್ರೇಮಾ ಎಂಬವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಪ್ರೇಮಾ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದರು.
ಈ ಕುರಿತಂತೆ ಡಿಸಿಪಿ (ಸಂಚಾರ-ದಕ್ಷಿಣ) ಶಿವಪ್ರಕಾಶ್ ದೇವರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯತೆಯಿಂದ ಕಾರು ಚಾಲಕ ವಾಹನ ಓಡಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ಪ್ರೇಮಾ ಸ್ಥಳದಲ್ಲೇ ಸಾವಿಗೀಡಾಗಿದ್ದು, ಕೃಷ್ಣರವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಚಾಲಕ, ಚಿತ್ರನಟ ನಾಗಭೂಷಣ್ ಅವರನ್ನು ಬಂಧಿಸಿ, ಸ್ಟೇಷನ್ ಬೇಲ್ ನೀಡಿ ಕಳುಹಿಸಲಾಗಿದೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅವರು ಮದ್ಯಪಾನ ಮಾಡಿಲ್ಲ ಎನ್ನುವುದು ಆಲ್ಕೋಹಾಲ್ ಟೆಸ್ಟಿಂಗ್ ಮೀಟರ್​ನಲ್ಲಿ ಕಂಡುಬಂದಿದೆ. ರಕ್ತದ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಮುಂದಿನ ವಿಚಾರಣೆಗೆ ಅವರನ್ನು ಮತ್ತೆ ಕರೆಯಲಾಗುತ್ತದೆ. ಅಲ್ಲದೆ ಅಪಘಾತದ ಬಳಿಕ ಅವರು ಸ್ಥಳೀಯರ ಜತೆ ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಡಿಸಿಪಿ ತಿಳಿಸಿದ್ದಾರೆ.
ಲಕ್ಷುರಿ ಕಾರಲ್ಲಿ ಬಂದು ಸೊಪ್ಪು ಮಾರಿದ ರೈತ!; ಮಾರ್ಕೆಟ್​ಗೆ ಬರ್ತಿದ್ದಂತೆ ಪಂಚೆ ಬಿಚ್ಚಿ ವ್ಯಾಪಾರಕ್ಕಿಳಿದ ವಿಡಿಯೋ ವೈರಲ್

ಉದ್ಯಮಿಯ ಸೊಸೆ ನೇಣಿಗೆ ಶರಣು; ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿತ್ತು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 3 =
Remember me
