ಚಿಕ್ಕಬಳ್ಳಾಪುರ:ತೆಲುಗಿನ ಪುಷ್ಪ ಸಿನಿಮಾ ಸ್ಟೈಲ್​ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ರಕ್ತ ಚಂದನ ಸಾಗಿಸುತ್ತಿದ್ದ ದಂಧೆಕೋರರ ಕಾರು ಅಪಘಾತವಾಗಿರುವ ಘಟನೆ ಚಿಕ್ಕಬಳ್ಳಾಪುರದ NH-44 ಹೆದ್ದಾರಿಯ ಸಾದಲಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಂಧ್ರ ಪ್ರದೇಶದ ಕಡಪ ಮೂಲದ ನಾಗೇಂದ್ರ, ಶ್ರೀನಿವಾಸಲು ಮತ್ತು ನಾಗರಾಜು ಎಂದು ಹೇಳಲಾಗಿದೆ. ಸದ್ಯ ಈ ಅಪಘಾತದಿಂದ ಖದೀಮರು ಕೋಟ್ಯಂತರ ರೂಪಾಯಿ ಮೌಲ್ಯದ ರಕ್ತಚಂದನವನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬುದು ಗೊತ್ತಾಗಿದೆ.
ಕಿರಾತಕರು ರಕ್ತಚಂದನ ಮರದ ತುಂಡುಗಳನ್ನು ಅಕ್ರಮವಾಗಿ ಆಂಧ್ರದ ಕಡಪದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ಚಿಕ್ಕಬಳ್ಳಾಪುರದ NH-44 ಹೆದ್ದಾರಿಯಲ್ಲಿ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಕಾರಿನ ಸೀಟ್ ಅಡಿ ಇಟ್ಟಿದ್ದ ರಕ್ತಚಂದನದ ತುಂಡುಗಳು ಹೊರ ಬಿದ್ದಿದ್ದು ಇದರಿಂದ ಪ್ರಕರಣ ಹೊರ ಬಂದಿದೆ.
ಇದನ್ನೂ ಓದಿ:ವಿಷಾಹಾರ ಸೇವನೆ ಮಾಡಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಯುವಕರು ಪ್ರಜ್ಞಾಹೀನ ಸ್ಥಿತಿಗೆ, ಇಬ್ಬರು ತೀವ್ರ ಅಸ್ವಸ್ಥ
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕ್ರೇನ್ ತರಿಸಿ ಕಾರನ್ನು ಮೇಲೆತ್ತಲಾಗಿದೆ.
ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾಜಾರೋಷವಾಗಿ ಖದೀಮರು ರಕ್ತಚಂದನ ಸಾಗಿಸುತ್ತಿರುವ ಬಗ್ಗೆ ಸಾಕಷ್ಟು ಮಾಹಿತಿ ಇದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸುಮ್ಮನಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನಿಶ್ಚಿತಾರ್ಥಕ್ಕೆ ಬಂದ ಅತಿಥಿಗಳಿಗೆ ಭಗವದ್ಗೀತೆಯ ಪ್ರತಿಗಳನ್ನು ಗಿಫ್ಟ್​​ ಕೊಟ್ಟ ವರ

ಅಮೆರಿಕ ಎಚ್ಚರಿಕೆ ನಡುವೆಯೂ ರಷ್ಯಾಗೆ ಆಗಮಿಸಿದ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್​ ಜಾಂಗ್​ ಉನ್!

VIDEO| ರಕ್ತದಲ್ಲಿ ಪತಿ ಚಿತ್ರ ಬಿಡಿಸಿದ ‘ಜೊತೆ ಜೊತೆಯಲಿ’ ಸೀರಿಯಲ್​ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 7 =
Remember me
