ಚಿಕ್ಕಮಗಳೂರು:ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮಗು ಸಹಿತ ನಾಲ್ವರು ಸ್ಥಳದಲ್ಲೇ ಸಾವು
ತರೀಕೆರೆ ತಾಲೂಕಿನ ಬೆಟ್ಟದ ತಾವರೆ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ದಂಪತಿ ಶ್ರೀನಿವಾಸ್-ಶ್ವೇತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಕ್ಕಳಿಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!
ಶ್ರೀನಿವಾಸ್ ಹಾಗೂ ಶ್ವೇತಾ ದಂಪತಿ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದರು. ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ!

ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ; ದಾಖಲೆಗೆ ಕಾರಣವೇನು? ಈ ಸಲದ ರಿಸಲ್ಟ್​ ವಿಶೇಷಗಳೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + twenty =
Remember me
