ತುಮಕೂರು:ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಒಟ್ಟು ನಾಲ್ವರು ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಈ ಅಪಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ಗುಬ್ಬಿ ತಾಲೂಕು ಕೊಡ್ಲಿಕ್ರಾಸ್‌ನಲ್ಲಿ ಕಾರು, ಕ್ಯಾಂಟರ್ ಮುಖಾಮುಖಿಯಾಗಿ ನಾಲ್ವರು ಮೃತಪಟ್ಟಿದ್ದು, ಇದೀಗ ಈ ಅಪಘಾತದಲ್ಲಿ ಮತ್ತೆ ನಾಲ್ವರು ಸಾವಿಗೀಡಾಗಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸೇತುವೆಯಿಂದ ಕಾರು ಕೆಳಕ್ಕೆ ಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ.
ಚಾಲಕ ಸೇರಿ ಆರು ಮಂದಿ ಪ್ರಯಾಣಿಸುತ್ತಿದ್ದ ಈ ಕಾರು ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಕಾರು ಭಾರಿ ಜಖಂಗೊಂಡಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತಪಟ್ಟವರೆಲ್ಲರೂ ಬೆಂಗಳೂರು ನಿವಾಸಿಗರು ಎಂಬುದು ತಿಳಿದು ಬಂದಿದೆ.
ಸಿಂಧನೂರಿನಲ್ಲಿ ನಡೆದ ಸ್ನೇಹಿತನ ಮದುವೆ ಮುಗಿಸಿಕೊಂಡು ವಾಪಸ್ ಬೆಂಗಳೂರು ಕಡೆಗೆ ಹಿಂದಿರುಗುತ್ತಿದ್ದಾಗ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿ ದೊಡ್ಡ ಆಲದಮರದ ಬಳಿ ಈ ಅಪಘಾತ ಸಂಭವಿಸಿದೆ. ಅತಿವೇಗದಿಂದ ಬಂದು ಕಾರು ರಾಷ್ಟ್ರೀಯ ಹೆದ್ದಾರಿ 48ರಲ್ಲಿರುವ ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದಿದೆ. ಆರು ಜನರಲ್ಲಿ ನಾಲ್ವರು ಸಾವಿಗೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯ ನಟಿಯ ತಲೆಗೆ 40 ಸಲ ಬ್ಯಾಟ್​ನಿಂದ ಬಾರಿಸಿ ಕೊಲೆ; ತಾಯಿಯನ್ನು ಕೊಲ್ಲಲು ಮಗನಿಗಿತ್ತು ವರ್ಷಗಳ ಕಾಲದ ಅಸಹನೆ!

‘ಚಿಕನ್​ ತರ್ತೀವಿ, ಅನ್ನ ಮಾಡಿಟ್ಟಿರಿ’ ಎಂದವರಿಗೆ ತಿನ್ನುವ ಋಣವೇ ಇರಲಿಲ್ಲ; ‘ಒಟ್ಟಿಗೇ ಊಟ ಮಾಡೋಣ’ ಎಂದಿದ್ದ ಮೂವರೂ ಜೊತೆಗೇ ಸತ್ತರು!

ಮೊದಲ ಪತಿಯ ಮರಣದ ಬಳಿಕ ಎರಡನೇ ಮದುವೆಯಾಗಿದ್ದಕ್ಕೆ ಸಾರ್ವಜನಿಕವಾಗಿ ಥಳಿಸಿ ತಲೆ ಬೋಳಿಸಿದ್ರು!

ನಿಂತಿದ್ದ ಕಾರಲ್ಲಿ ಶವ ಪತ್ತೆ: ಬೆಂಗಳೂರು ಮೂಲದ ವ್ಯಕ್ತಿಯ ನಿಗೂಢ ಸಾವು!

ಗುಟ್ಟಾಗಿ ಸೊಸೆಯ ಬೆಡ್​ರೂಮ್​ಗೆ ಹೋಗುತ್ತಿದ್ದ ಅತ್ತೆ; ಪ್ರೆಗ್ನೆನ್ಸಿ ಟೆಸ್ಟ್​ ಪಾಸಿಟಿವ್ ಪತ್ತೆ!; ನಿಜಕ್ಕೂ ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 13 =
Remember me
